/newsfirstlive-kannada/media/post_attachments/wp-content/uploads/2025/06/VIDHANASOUDHA_RAIN.jpg)
ಬೆಂಗಳೂರು: ಕಳೆದ ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಆರಂಭವಾಗಿದೆ. ಬೆಂಗಳೂರು ನಗರದಲ್ಲಿ ಸಂಜೆ ಆಗುತ್ತಿದ್ದಂತೆ ವರುಣ ಎಂಟ್ರಿಯಾಗಿದ್ದರಿಂದ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದವರು ತೊಂದರೆಗೆ ಸಿಲುಕಿದಂತೆ ಆಗಿದೆ.
/newsfirstlive-kannada/media/post_attachments/wp-content/uploads/2025/06/BNG_NEW_RAIN.jpg)
ಸಿಲಿಕಾನ್ ಸಿಟಿಯ ಟೌನ್​ಹಾಲ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್, ಹೆಬ್ಬಾಳ, ಮೇಖ್ರಿ ಸರ್ಕಲ್, ಶಿವಾನಂದ, ಕೆ.ಆರ್ ಮಾರ್ಕೆಟ್​ ಸುತ್ತಾಮುತ್ತಾ ಜೋರು ಮಳೆಯಾಗಿದೆ. ಎಂ.ಜಿ ರೋಡ್, ಬ್ರಿಗೇಡ್ ರೋಡ್, ಕಬ್ಬನ್ ಪಾರ್ಕ್, ವಿಧಾನಸೌಧ, ಕಸ್ತೂರಿ ಬಾ ರಸ್ತೆ, ಮಲ್ಯ ರಸ್ತೆಯಲ್ಲೂ ವರಣನ ಆರ್ಭಟವಿತ್ತು. ಸಂಜೆಯ ಮಳೆ ಹಾಗೇ ರಾತ್ರಿ ಕೂಡ ಮುಂದುವರೆಯುವ ಸಾಧ್ಯತೆ ಇದೆ.
ಜೂನ್ 13ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಮುನ್ಸೂಚನೆ ಇದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
/newsfirstlive-kannada/media/post_attachments/wp-content/uploads/2025/06/VIDHANASOUDHA_BNG_RAIN.jpg)
ಇದರ ನಡುವೆ ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಕೊಡಗಿನ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಜೂನ್ 13ರ ವರೆಗೆ ಹವಾಮಾನ ಇಲಾಖೆ ಅಲರ್ಟ್ ಕೊಟ್ಟಿದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us