/newsfirstlive-kannada/media/post_attachments/wp-content/uploads/2024/06/RAIN-RAIN-4.jpg)
ಬೆಂಗಳೂರು: ಈಗಾಗಲೇ ರಾಜ್ಯದೆಲ್ಲೆಡೆ ಮುಂಗಾರು ಮಳೆಯಾಗುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಇದರ ಬೆನ್ನಲ್ಲೇ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ.
ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ 7ರವರೆಗೆ ಕರಾವಳಿಯಲ್ಲಿ ವರುಣಾರ್ಭಟದ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 7ರವರೆಗೆ ಭಾರೀ ಮಳೆಯ ನಿರೀಕ್ಷೆ ಇರುವ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
/newsfirstlive-kannada/media/post_attachments/wp-content/uploads/2024/05/BNG_RAINS.jpg)
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದಿನಿಂದ ಜುಲೈ 7ರವರೆಗೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಅದರಂತೆ ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ವರದಿ ಇದೆ. ಈ ಸಂಬಂಧ ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಕೂಡ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ
- ಚಿಕ್ಕಮಗಳೂರು ಕೊಟ್ಟಿಗೆಹಾರ- 10 ಸೆಂಟಿ ಮೀಟರ್
- ಲೋಂಡಾ (ಬೆಳಗಾವಿ)- 7 ಸೆ.ಮೀ
- ಸಿದ್ದಾಪುರ (ಉತ್ತರ ಕನ್ನಡ)- 5 ಸೆಂ.ಮೀ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us