newsfirstkannada.com

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರು; ನಾಳೆ ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Share :

23-07-2023

  ಕಲ್ಯಾಣ ಕರ್ನಾಟಕ ಭಾಗದಲ್ಲಿ ವರುಣನ ಆರ್ಭಟ ಜೋರು

  ಭಾರೀ ಮಳೆಯಿಂದ ತುಂಬಿ ಹರಿದ ನದಿಗಳು, ಜಲಾಶಯ

  ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ಬೆಳಗಾವಿ: ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿವೆ. ಪ್ರಮುಖ ಜಲಾಶಯಗಳಿಗೆ ಜೀವಕಳೆ ಬಂದಿದ್ದು, ಹರಿಯೋ ನೀರಿನ ರಭಸ ಜೋರಾಗಿದೆ. ಮಳೆ ನೀರಿನಿಂದ ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಬೆಳಗಾವಿ ತಾಲೂಕಿನ ಹಲವು ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ನಾಳೆ ಅಂದರೆ ಸೋಮವಾರ ರಜೆ ಘೋಷಿಸಲಾಗಿದೆ.

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳಗಾವಿ ತಾಲೂಕಿನ ಹಲವು ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಕಿತ್ತೂರು ಕರ್ನಾಟಕ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ. ಇನ್ನು ಇಂದಿನಿಂದ ಜುಲೈ 27ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಜೋರು

ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಮಳೆಯಾಗುತ್ತಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳ ನೀರಿನ ಮಟ್ಟದಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಮಳೆ ನೀರಿನಿಂದ ಶರಾವತಿ, ಅಘನಾಶಿನಿ, ಶರಾವತಿ, ಮುಕ್ತಿಹೊಳೆ ತುಂಬಿ ಹರಿಯುತ್ತಿವೆ. ಯಲ್ಲಾಪುರ, ಸಿದ್ದಾಪುರ ಭಾಗಗಳಲ್ಲಿ ನಾಲ್ಕು ದಿನಗಳಿಂದ ಸತತ 100 ಮಿಲಿ ಮೀಟರ್​ನಷ್ಟು ದಾಖಲೆ ಮಳೆಯಾಗಿದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರು; ನಾಳೆ ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

https://newsfirstlive.com/wp-content/uploads/2023/07/rains-1.jpg

Load More