ಇಂದಿನಿಂದ 3 ತಿಂಗಳು ಶೃಂಗೇರಿ, ಮಂಗಳೂರು NH ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

author-image
admin
Updated On
ಇಂದಿನಿಂದ 3 ತಿಂಗಳು ಶೃಂಗೇರಿ, ಮಂಗಳೂರು NH ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ
Advertisment
  • ನಿನ್ನೆ ರಾತ್ರಿ ಸಂಪೂರ್ಣ ವಾಹನ ನಿರ್ಬಂಧ ಹೇರಿದ್ದ ಜಿಲ್ಲಾಡಳಿತ
  • ನಿನ್ನೆ ರಾತ್ರಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ, ಗುಡ್ಡ ಕುಸಿತ
  • ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚಿಸಿದ ಅಧಿಕಾರಿಗಳು

ಚಿಕ್ಕಮಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನಿನ್ನೆ ರಾತ್ರಿ ಚಿಕ್ಕಮಗಳೂರಲ್ಲಿ ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಶೃಂಗೇರಿ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು.

ನಿನ್ನೆ ರಾತ್ರಿ ಸಂಪೂರ್ಣ ವಾಹನ ನಿರ್ಬಂಧ ಹೇರಿದ್ದ ಜಿಲ್ಲಾಡಳಿತ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚಿಸಿತ್ತು.

publive-image

ಗುಡ್ಡ ಕುಸಿತ, ಕಿರು ಸೇತುವೆ ಶಿಥಿಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇಂದಿನಿಂದ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದೆ.

ಇದನ್ನೂ ಓದಿ: ವಿಶ್ವ ವಿಖ್ಯಾತ ಜೋಗ ಜಲಪಾತ ಧುಮ್ಮುಕ್ಕುವ ಗತವೈಭವಕ್ಕೆ ಮತ್ತೆ ಮೆರಗು.. Photos 

ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ತನಿಕೋಡ್‌ನಿಂದ ಎಸ್.ಕೆ ಬಾರ್ಡರ್‌ವರೆಗೆ ಜಿಲ್ಲಾಡಳಿತ ನಿಷೇಧ ವಿಧಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment