/newsfirstlive-kannada/media/post_attachments/wp-content/uploads/2025/06/Heinrich_Klaasen.jpg)
ಆಸ್ಟ್ರೇಲಿಯಾದ ಸ್ಟಾರ್ ಆಲ್​​ರೌಂಡರ್​ ಗ್ಲೆನ್ ಮ್ಯಾಕ್ಸ್​​ವೆಲ್ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಣೆ ಬೆನ್ನಲ್ಲೇ ದಕ್ಷಿಣ ಆಫ್ರಿಕಾದ ಹೆನ್ರಿಚ್ ಕ್ಲಾಸೆನ್ ಅವರು ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಕಮ್​ ಬ್ಯಾಟರ್ ಆಗಿರುವ ಹೆನ್ರಿಚ್ ಕ್ಲಾಸೆನ್ ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಅನೌನ್ಸ್​ ಮಾಡಿದ್ದಾರೆ. ಈ ಬಗೆಗಿನ ಅಧಿಕೃತ ಮಾಹಿತಿಯನ್ನು ಕ್ಲಾಸೆನ್ ಅವರು ತಮ್ಮ ಇನ್​ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಕುಟುಂಬದ ಕಡೆಗೆ ಹೆಚ್ಚಿನ ಗಮನ ಹರಿಸಲು ಕ್ರಿಕೆಟ್​ನಿಂದ ದೂರ ಆಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಈ ನಿರ್ಧಾರ ತೆಗೆದುಕೊಳ್ಳಲು ಸಾಕಷ್ಟು ಯೋಚನೆ ಮಾಡಿದ್ದೇನೆ. ದಕ್ಷಿಣ ಆಫ್ರಿಕಾ ತಂಡದಲ್ಲಿ ಆಡಿರುವುದು ನನ್ನ ಅದೃಷ್ಟ. ತುಂಬಾ ಕಷ್ಟ ಎನಿಸಿದರೂ ಶಾಂತವಾಗಿಯೇ ಕುಟುಂಬಕ್ಕಾಗಿ ಕ್ರಿಕೆಟ್​ ಅನ್ನು ತೊರೆಯಬೇಕಿದೆ. ಇದುವರೆಗೆ ನನಗೆ ಸಪೋರ್ಟ್​ ಮಾಡಿದ ಎಲ್ಲರಿಗೂ ಧನ್ಯವಾದಗಳು. ಇನ್ನು ಹೆನ್ರಿಚ್ ಕ್ಲಾಸೆನ್ ಅವರು 7 ವರ್ಷಗಳಿಂದ ಸೌತ್ ಆಫ್ರಿಕಾ ತಂಡದಲ್ಲಿ ಆಡುತ್ತಿದ್ದರು. ಸದ್ಯ ಈಗ ನಿವೃತ್ತಿ ಘೋಷಣೆ ಮಾಡಿದ್ದಾರೆ.
2018ರಲ್ಲಿ ದಕ್ಷಿಣ ಆಫ್ರಿಕಾ ತಂಡದ ಪರ ಪದಾರ್ಪಣೆ ಮಾಡಿದ್ದ ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್​​ಗೆ ಖ್ಯಾತಿ ಪಡೆದಿದ್ದರು. ಏಕದಿನ ಕ್ರಿಕೆಟ್‌ನಲ್ಲಿ 60 ಪಂದ್ಯಗಳನ್ನು ಆಡಿದ್ದು 2,141 ರನ್ ಗಳಿಸಿದ್ದಾರೆ. ಇನ್ನು 58 ಅಂತರರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ 141.8 ಸ್ಟ್ರೈಕ್​​ರೇಟ್‌ನಲ್ಲಿ 1,000 ರನ್ ಗಳಿಸಿದ್ದಾರೆ. ಇನ್ನು ಟೆಸ್ಟ್​ ಕ್ರಿಕೆಟ್​ಗೆ ಬಂದರೆ 4 ಟೆಸ್ಟ್​ ಪಂದ್ಯಗಳಿಂದ 8 ಇನ್ನಿಂಗ್ಸ್​ನಲ್ಲಿ ಒಟ್ಟು 104 ರನ್​ ಗಳಿಸಿದ್ದರು. ಸದ್ಯ ಈಗ ತಮ್ಮ ಕುಟುಂಬಕ್ಕಾಗಿ ಕ್ರಿಕೆಟ್​ನಿಂದ ದೂರವಾಗಿರುವುದಾಗಿ ತಿಳಿಸಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ