/newsfirstlive-kannada/media/post_attachments/wp-content/uploads/2023/12/Team-India-6.jpg)
ಟೀಮ್ ಇಂಡಿಯಾ, ಬಾಂಗ್ಲಾದೇಶದ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಮುಗಿದಿದೆ. ಬಾಂಗ್ಲಾ ವಿರುದ್ಧ ಟೀಮ್ ಇಂಡಿಯಾ 2-0 ಅಂತರದಿಂದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಈಗ ಎಲ್ಲರ ಕಣ್ಣು ಮುಂದೆ ನಡೆಯಲಿರೋ ಟಿ20 ಸರಣಿ ಮೇಲೆ ನೆಟ್ಟಿದೆ.
ಇದೇ ಭಾನುವಾರ ಅಕ್ಟೋಬರ್ 6ನೇ ತಾರೀಕು ಗ್ವಾಲಿಯರ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯಲಿರೋ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ಎದುರಿಸಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ ಎಲೆವೆನ್ ಹೇಗಿರಲಿದೆ? ಅನ್ನೋ ಬಗ್ಗೆ ಜೋರು ಚರ್ಚೆ ನಡೆಯುತ್ತಿದೆ.
ಗಿಲ್, ಜೈಸ್ವಾಲ್ ಬದಲಿಗೆ ಯಾರಿಗೆ ಚಾನ್ಸ್?
ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಬಿಸಿಸಿಐ ಸೆಲೆಕ್ಷನ್ ಕಮಿಟಿ ಬಲಿಷ್ಠ ಟೀಮ್ ಇಂಡಿಯಾ ಪ್ರಕಟಿಸಿದೆ. ಗಿಲ್, ಜೈಸ್ವಾಲ್ಗೆ ರೆಸ್ಟ್ ನೀಡಿದ್ದು, ಹೊಸಬರಿಗೆ ಅವಕಾಶ ನೀಡಲಾಗಿದೆ. ಇಂತಹ ಪರಿಸ್ಥಿತಿ ನಾಯಕ ಸೂರ್ಯಕುಮಾರ್ ಯಾದವ್ಗೆ ಪ್ಲೇಯಿಂಗ್ ಎಲೆವೆನ್ ಆಯ್ಕೆಯದ್ದೇ ಯೋಚನೆ ಆಗಿದೆ. ಗಿಲ್, ಜೈಸ್ವಾಲ್ ಅನುಪಸ್ಥಿತಿಯಲ್ಲಿ ಭಾರತಕ್ಕೆ ಇನ್ನಿಂಗ್ಸ್ ಆರಂಭಿಸುವ ಜವಾಬ್ದಾರಿ ಯಾರದ್ದು? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಸದ್ಯಕ್ಕೆ ಸಿಕ್ಕಿರೋ ಮಾಹಿತಿ ಪ್ರಕಾರ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಓಪನಿಂಗ್ ಮಾಡಬಹುದು ಎಂಬುದು.
ಶ್ರೀಲಂಕಾ ವಿರುದ್ಧ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ರಿಯಾನ್ ಪರಾಗ್ ಮತ್ತು ವಾಷಿಂಗ್ಟನ್ ಸುಂದರ್ ಕೂಡ ಪ್ಲೇಯಿಂಗ್ ಎಲೆವೆನ್ನಲ್ಲಿ ಸ್ಥಾನ ಪಡೆದುಕೊಳ್ಳಲಿದ್ದಾರೆ. ಟಿ20 ವಿಶ್ವಕಪ್ ತಂಡದ ಭಾಗವಾಗಿದ್ದ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅರ್ಷದೀಪ್ ಸಿಂಗ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ರಿಂಕು ಸಿಂಗ್, ರವಿ ಬಿಷ್ಣೋಯ್, ಮಯಾಂಕ್ ಯಾದವ್ಗೂ ಅವಕಾಶ ಸಿಗಲಿದೆ.
ಭಾರತ ಸಂಭಾವ್ಯ ಪ್ಲೇಯಿಂಗ್-11
ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಮಯಾಂಕ್ ಯಾದವ್.
ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಕೇಸ್; ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ಗೆ ಸಮನ್ಸ್ ಜಾರಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ