ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ
ಮಗುವಿನ ಮೊದಲ ವಿಡಿಯೋವನ್ನು ಹಂಚಿಕೊಂಡ ಸ್ಟಾರ್ ಜೋಡಿ
ಕವಿತಾ ಗೌಡ ಹಾಗೂ ಚಂದನ್ ಕುಮಾರ್ಗೆ ಈಗ ಖುಷಿ ದುಪ್ಪಟ್ಟಾಗಿದೆ
ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಕವಿತಾ ಗೌಡ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಚಂದನ್ ಕುಮಾರ್ ಅವರು ತಮ್ಮ ಅಭಿಮಾನಿಗಳೊಂದಿಗೆ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಲಕ್ಷ್ಮೀ ಬಾರಮ್ಮ ಸೀರಿಯಲ್ ನಟಿ ಕವಿತಾ ಗೌಡ ಹೊಸ ಫೋಟೋಶೂಟ್; ತುಂಬು ಗರ್ಭಿಣಿಗೆ ಫ್ಯಾನ್ಸ್ ಶುಭ ಹಾರೈಕೆ
ಕವಿತಾ ಗೌಡ ಅವರು ಆಸ್ಪತ್ರೆಗೆ ತೆರಳುತ್ತಿದ್ದಂತೆ ಪೋಸ್ಟ್ ಮಾಡಿದ್ದ ಚಂದನ್ ಇದೀಗ ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ ಅನ್ನೋ ಮೂಲಕ ಮಗನ ಮೊದಲ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕವಿತಾ ಗೌಡ ಹಾಗೂ ಚಂದನ್ ಕುಮಾರ್ಗೆ ಈಗ ಖುಷಿ ದುಪ್ಪಟ್ಟಾಗಿದೆ. ಲಕ್ಷ್ಮೀ ಬಾರಮ್ಮ ಸೀರಿಯಲ್ ಮೂಲಕ ಖ್ಯಾತಿ ಪಡೆದುಕೊಂಡ ಈ ಸ್ಟಾರ್ ಜೋಡಿ ಚೊಚ್ಚಲ ಮಗುವನ್ನು ಬರಮಾಡಿಕೊಂಡಿದ್ದಾರೆ.
View this post on Instagram
ಕಳೆದ ಮೇ 5ರಂದೇ ಕವಿತಾ ಗೌಡ ಅವರು ಮುದ್ದಾದ ಫೋಟೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಅಂತ ತಿಳಿಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಕಿರುತೆರೆ ನಟ ನಟಿಯರು ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್ಗೆ ಶುಭ ಹಾರೈಸಿದ್ದರು. ಆಗಾಗ ನಟಿ ಕವಿತಾ ಗೌಡ ತಮ್ಮ ಮುದ್ದಾದ ಬೇಬಿ ಬಂಪ್ ಫೋಟೋವನ್ನು ಶೇರ್ ಮಾಡಿಕೊಳ್ಳುತ್ತಾ ಇದ್ದರು.
ಗಣೇಶ ಹಬ್ಬದ ನಿಮಿತ್ತ ನಟಿ ಕವಿತಾ ಗೌಡ ಅವರು ಚೆಂದವಾಗಿ ಸೀರೆಯುಟ್ಟು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದರು. ಒಂದು ಕಡೆ ಗಣೇಶನ ಮೂರ್ತಿಯನ್ನು ಹಿಡಿದುಕೊಂಡು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದರು. ಇದೇ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಾಗ ಗಣೇಶ ಬರಲಿದ್ದಾನೆ. ಹರುಷ ತರಲಿದ್ದಾನೆ. ಕಾಟ ಕೊಡಲಿದ್ದಾನೆ ಅಂತ ಅಭಿಮಾನಿಗಳು ಕಾಮೆಂಟ್ಸ್ ಹಾಕಿದ್ದಾರೆ.
ಇದನ್ನೂ ಓದಿ: ಗರ್ಭಿಣಿ ಪತ್ನಿಗಾಗಿ ಏನೆಲ್ಲಾ ಮಾಡ್ತಾರೆ ಚಂದನ್ ಗೌಡ; ಕವಿತಾ ಗೌಡ ಆಸೆ ಈಡೇರಿಸಿದ್ರು ನೋಡಿ
ಕವಿತಾ ಗೌಡ ಅವರು ಕನ್ನಡ ಕಿರುತೆರೆ ನಟಿ. ಚಂದನ್ ಕುಮಾರ್ ಅವರು ಕಿರುತೆರೆ, ಬೆಳ್ಳಿತೆರೆಯಲ್ಲಿ ಮುಂಚಿದ ನಟ. ಕವಿತಾ ಗೌಡ ಹಾಗೂ ಚಂದನ್ ಅವರು ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ನಟಿಸಿದ್ದರು. ತದನಂತರ ಲಾಕ್‌ಡೌನ್ ಸಮಯದಲ್ಲಿ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಬಳಿಕ 2021 ಮೇ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ