/newsfirstlive-kannada/media/post_attachments/wp-content/uploads/2024/08/cm-siddu-1.jpg)
ಧಾರವಾಡ: ಇಂದು ಧಾರವಾಡ ಹೈಕೋರ್ಟ್ನಲ್ಲಿ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿ ವಿಚಾರಣೆಯನ್ನ ಜನವರಿ 27ಕ್ಕೆ ಮುಂದೂಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ.
ಸಿಎಂ ಪರ ವಕೀಲ ಕಪಿಲ್ ಸಿಬಲ್ ಮನವಿ ಮೇರೆಗೆ ಅರ್ಜಿ ವಿಚಾರಣೆಯನ್ನ ಮುಂದೂಡಲಾಗಿದೆ. ಇನ್ನು ಅರ್ಜಿ ವಿಚಾರಣೆಗೂ ಮುನ್ನ ಮಾತನಾಡಿದ ಸ್ನೇಹಮಯಿ ಕೃಷ್ಣ, ಇವತ್ತೇ ತೀರ್ಪು ಪ್ರಕಟ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ಆದ್ರೀಗ ಸ್ನೇಹಮಯಿ ಕೃಷ್ಣ ನಿರೀಕ್ಷೆ ಹುಸಿಯಾಗಿದ್ದು, ಇದು ಸಿಎಂಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ