/newsfirstlive-kannada/media/post_attachments/wp-content/uploads/2024/06/darshan22.jpg)
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎ1 ಆರೋಪಿ ಪವಿತ್ರಾಗೌಡ ಹಾಗೂ ಎ2 ಆರೋಪಿ ನಟ ದರ್ಶನ್ ಅವರಿಗೆ ಪೂರ್ಣಾವಧಿ ಜಾಮೀನು ಅನ್ನು ಹೈಕೋರ್ಟ್​ ಮಂಜೂರು ಮಾಡಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್, ಪವಿತ್ರಾ ಗೌಡ ಸೇರಿ ಇನ್ನಿತರರ ಆರೋಪಿಗಳು ಜೈಲು ಪಾಲಾಗಿದ್ದರು. ಈ ಪ್ರಕರಣ ಭಾರೀ ಸದ್ದು ಮಾಡಿತ್ತು. ಕೇಸ್​ನಲ್ಲಿ ಪವಿತ್ರಾ ಗೌಡ ಎ1 ಆರೋಪಿ ಆಗಿದ್ರೆ ದರ್ಶನ್ ಎ2 ಆರೋಪಿ ಆಗಿದ್ದರು.
ಈ ಮೊದಲೇ ಪವಿತ್ರಾ ಗೌಡ ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿಯನ್ನು ಕೋರ್ಟ್​ ರದ್ದು ಮಾಡಿತ್ತು. ಆದರೆ ಈಗ ಅವರಿಗೂ ಜಾಮೀನು ಸಿಕ್ಕಿದೆ. ದರ್ಶನ್ ಅವರಿಗೆ ವೈದ್ಯಕೀಯ ಜಾಮೀನು ಸಿಕ್ಕಿತ್ತು. ಹೀಗಾಗಿ ಹೊರ ಬಂದು ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಇಬ್ಬರ ಜೊತೆ ಇನ್ನು ಐವರಿಗೆ ಬೇಲ್​ ಸಿಕ್ಕಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ: ಅಲ್ಲು ಅರ್ಜುನ್ ಅರೆಸ್ಟ್​; ಸಂಚಲನ ಮೂಡಿಸಿದ ಪೊಲೀಸ್ ಅಧಿಕಾರಿ ಹೇಳಿಕೆ
/newsfirstlive-kannada/media/post_attachments/wp-content/uploads/2024/09/Darshan-Pavithra-Gowda-Photo-3.jpg)
ಎ1 ಪವಿತ್ರಾ ಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ12 ಲಕ್ಷ್ಮಣ್, ಎ11 ನಾಗರಾಜ್, ಎ14 ಪ್ರದೋಷ್​​ಗೆ ಜಾಮೀನು ಮಂಜೂರು ಮಾಡಲಾಗಿದೆ. ದರ್ಶನ್ ಅವರು ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಆದರೆ ಪರಪ್ಪನ ಜೈಲಿನಲ್ಲಿ ಕೆಲ ಸಂಗತಿಗಳು ನಡೆದಿದ್ದರಿಂದ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿತ್ತು. ಇದರ ಜೊತೆ ದರ್ಶನ್ ಗ್ಯಾಂಗ್​ನ ಇನ್ನಿತರ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿತ್ತು.
ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬೆಂಗಳೂರಿನ ಬಿಜಿಎಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರಿಗೆ ಪೂರ್ಣಾವಧಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us