/newsfirstlive-kannada/media/post_attachments/wp-content/uploads/2024/07/Darshan-Highcourt.jpg)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ: ದರ್ಶನ ಗ್ಯಾಂಗ್ಗೆ ಜಾಮೀನು; ಬೇಸರದಲ್ಲಿ ರೇಣುಕಾಸ್ವಾಮಿ ತಂದೆ ಹೇಳಿದ್ದೇನು?
ಈ ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.
ಇದರ ಮಧ್ಯೆ ನಟ ದರ್ಶನ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 1 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ
ಟ್ರಾಯಲ್ ಕೋರ್ಟ್ ಎಲ್ಲಾ ಡೇಟ್ ಹಾಜರಾಗಬೇಕು. ಪರೋಕ್ಷವಾಗಿ ಅಥವಾ ಪ್ರತ್ಯಕ್ಷವಾಗಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಇದೇ ತರಹದ ಬೇರೆ ಕ್ರೈಂ ಯಾವುದು ಮಾಡಬಾರದು. ಅಧೀನ ನ್ಯಾಯಾಲಯದ ಅನುಮತಿ ಇಲ್ಲದೇ ಕೋರ್ಟ್ ವ್ಯಾಪ್ತಿಯಿಂದ ಹೊರಹೋಗಬಾರದು ಎಂದು ಆದೇಶಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ