/newsfirstlive-kannada/media/post_attachments/wp-content/uploads/2024/12/ct-ravi.jpg)
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಕೇಸ್ನಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಾವುದೇ ನೋಟಿಸ್ ನೀಡದೆ ಬಂಧಿಸಿದ ಕಾರಣ ಸಿ.ಟಿ ರವಿ ಅವರನ್ನು ಕೂಡಲೇ ರಿಲೀಸ್ ಮಾಡಿ ಎಂದು ಹೈಕೋರ್ಟ್ ಆದೇಶಿಸಿದೆ.
ಷರತ್ತುಬದ್ಧ ರಿಲೀಸ್ ಮಾಡಲು ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಇದೇ ಸಂದರ್ಭದಲ್ಲಿ ಯಾರಿಗೆ ಆಗಲಿ ನೋಟಿಸ್ ನೀಡಿ ಬಂಧಿಸಬೇಕು. ಅರೆಸ್ಟ್ ಮಾಡೋ ಮುನ್ನ ನೋಟಿಸ್ ನೀಡಬೇಕಿತ್ತು. ಬಂಧನ ಪ್ರಕ್ರಿಯೆಯಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಛೀಮಾರಿ ಹಾಕಲಾಗಿದೆ. ಹಾಗೆಯೇ ಕೂಡಲೇ ರಿಲೀಸ್ ಮಾಡಿ ಹ್ಯಾಂಡ್ ನೋಟಿಸ್ ನೀಡಬೇಕು ಎಂದು ಹೈಕೋರ್ಟ್ ಸೂಚನೆ ಕೊಟ್ಟಿದೆ.
ಸದ್ಯ ಸಿ.ಟಿ ರವಿ ಅವರಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಎಫ್ಐಆರ್ ರದ್ದು ಕೋರಿ ಸಲ್ಲಿಸಿರೋ ಅರ್ಜಿ ವಿಚಾರಣೆ ಮುಂದೆ ನಡೆಯಲಿದೆ. ಸಿ.ಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡೆಗೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಹಾಗೆಯೇ ಪೊಲೀಸರ ವಿಚಾರಣೆಗೆ ಹಾಜರಾಗಬೇಕು ಎಂದು ಸಿ.ಟಿ ರವಿ ಅವರಿಗೆ ಸೂಚನೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ