ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ ಮಾಡಲು ಪಿತೂರಿ ಆರೋಪ
ಬಸವರಾಜನ್, ಸೌಭಾಗ್ಯ ಎಂಬುವರ ವಿರುದ್ಧ ದಾಖಲಾಗಿದ್ದ ಎಫ್ಐಆರ್
ಇಬ್ಬರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ!
ಬೆಂಗಳೂರು: ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲು ಪಿತೂರಿ ನಡೆಸಿದ್ದರು ಎಂದು ಆರೋಪಿಸಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್ ಮತ್ತವರ ಪತ್ನಿ ಸೌಭಾಗ್ಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು. ಈ ಎಫ್ಐಆರ್ ರದ್ದು ಕೋರಿ ಬಸವರಾಜನ್ ಮತ್ತು ಸೌಭಾಗ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಎಫ್ಐಆರ್ ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಇದರ ಪರಿಣಾಮ ಹೈಕೋರ್ಟ್ನಲ್ಲಿ ಮರುಘಾ ಶ್ರೀಗಳಿಗೆ ಭಾರೀ ಹಿನ್ನಡೆಯಾಗಿದೆ.
ಏನಿದು ಕೇಸ್..?
ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಶಿವಮೂರ್ತಿ ಶರಣರ ವಿರುದ್ಧ ಸುಳ್ಳು ಕೇಸು ದಾಖಲು ಮಾಡಲಾಗಿದೆ. ಇದಕ್ಕಾಗಿ ಹಲವರು ಸಂತ್ರಸ್ತ ಬಾಲಕಿಯರನ್ನು ಪ್ರೇರೇಪಿಸಿದ್ದಾರೆ. ಹಣ ಪಡೆಯಬೇಕು ಅನ್ನೋ ಉದ್ದೇಶದಿಂದ ಈ ಕೆಲಸ ಮಾಡಲಾಗಿದೆ. ಈ ವ್ಯವಸ್ಥಿತ ಪಿತೂರಿ ಮಾಡಿದವರನ್ನು ಬಂಧಿಸಿ ಎಂದು ಮಠದ ಉಸ್ತುವಾರಿ ಸ್ವಾಮೀಜಿಯಾದ ಬಸವಪ್ರಭು ಮಾಜಿ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್ ಮತ್ತವರ ಪತ್ನಿ ಸೌಭಾಗ್ಯ ವಿರುದ್ಧ ಕೇಸ್ ಮಾಡಿದ್ದರು. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ