ದೇಶದಲ್ಲಿ ಮತ್ತೆ ಸದ್ದು ಮಾಡಿದ ಹಿಜಾಬ್ ವಿವಾದ
ಜಿಲ್ಲಾ ಶಿಕ್ಷಣಾಧಿಕಾರಿ ಮೇಲೆ ತೀವ್ರ ಆಕ್ರೋಶ
ಬಿಜೆಪಿ ಕಾರ್ಯಕರ್ತರಿಂದ ಹೋರಾಟದ ಎಚ್ಚರಿಕೆ
ದಾಮೋಹ್: ದೇಶಾದ್ಯಂತ ಸದ್ದು ಮಾಡಿದ್ದ ಹಿಜಾಬ್ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮಧ್ಯಪ್ರದೇಶದ ದಾಮೋಹ್ ಜಿಲ್ಲೆ ಗಂಗಾ ಜಮುನಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇಂತಹದೊಂದು ಘಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಂಗಾ ಜಮುನಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಒಂದು ಫೋಟೋ ಬ್ಯಾನರ್ ಹಾಕಲಾಗಿದೆ. ಅದರಲ್ಲಿ ಹಿಂದೂ ಧರ್ಮದ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಪೋಟೋ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ಖಂಡಿಸಿದ ಬಿಜೆಪಿ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿದ್ದರು. ಈ ವೇಳೆ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಜಿಲ್ಲಾ ಶಿಕ್ಷಣಾಧಿಕಾರಿ ಮೇಲೆ ಇಂಕ್ ಸುರಿದು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಹಿಂದೂ ಮತ್ತು ಜೈನ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ಈ ಶಾಲೆಯಲ್ಲಿ ಓದುತ್ತಿದ್ದಾರೆ. ಹಿಂದೂ ಹುಡುಗಿಗೆ ಹಿಜಾಬ್ ಧರಿಸಿದ ಬ್ಯಾನರ್ ಹಾಕಿದ್ದೇ ಈ ರಾದ್ಧಾಂತಕ್ಕೆ ಕಾರಣವಾಗಿದೆ. ಹಿಂದೂ ಹೋರಾಟಗಾರರು ಖಾಸಗಿ ಶಾಲೆಯ ವಿರುದ್ಧ ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ.
ಕಳೆದ ವರ್ಷವಷ್ಟೇ ಕರ್ನಾಟಕದಲ್ಲಿ ಹಿಜಾಬ್ ಬ್ಯಾನ್ ವಿವಾದ ದೊಡ್ಡ ಸಂಚಲನ ಸೃಷ್ಟಿಸಿತ್ತು. ಬಿಜೆಪಿ ನೇತೃತ್ವದ ಸರ್ಕಾರ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಈ ನಿರ್ಧಾರಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ