Advertisment

ರಾಜೀನಾಮೆ ಕೊಟ್ರಾ ಹಿಮಾಚಲ ಪ್ರದೇಶ ಸಿಎಂ? ಕಾಂಗ್ರೆಸ್‌ ಸರ್ಕಾರ ಉಳಿಸಲು ಡಿಕೆಶಿ ಸರ್ಕಸ್‌

author-image
admin
Updated On
ರಾಜೀನಾಮೆ ಕೊಟ್ರಾ ಹಿಮಾಚಲ ಪ್ರದೇಶ ಸಿಎಂ? ಕಾಂಗ್ರೆಸ್‌ ಸರ್ಕಾರ ಉಳಿಸಲು ಡಿಕೆಶಿ ಸರ್ಕಸ್‌
Advertisment
  • ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ರಾಜೀನಾಮೆ ನೀಡಿದ್ರಾ?
  • ಬಿಜೆಪಿ ಪಕ್ಷಕ್ಕೆ ಜೈ ಎಂದ 6 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ
  • ಕಾಂಗ್ರೆಸ್ ಸರ್ಕಾರ ಉಳಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ತಂತ್ರಗಾರಿಕೆ ಶುರು

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಹುಮತ ಕಳೆದುಕೊಳ್ಳುವ ಅಪಾಯದಲ್ಲಿದೆ. ರಾಜ್ಯಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಶಾಸಕರು ಸಿಎಂ ಸುಖವಿಂದರ್ ಸಿಂಗ್ ಸುಖು ವಿರುದ್ಧ ಬಂಡಾಯ ಎದ್ದಿದ್ದು, ಬಿಜೆಪಿಯತ್ತ ಮುಖಮಾಡಿದ್ದಾರೆ. ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಿಎಂ ಸುಖವಿಂದರ್ ಸಿಂಗ್ ಸುಖು ಅವರು ರಾಜೀನಾಮೆಗೆ ನೀಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

Advertisment

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ 6 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷವನ್ನು ಸೇರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಸುಖವಿಂದರ್ ಸಿಂಗ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಅವಿಶ್ವಾಸ ಮಂಡನೆ ಮಾಡಲು ಮುಂದಾಗಿದ್ದಾರೆ. ಕಾಂಗ್ರೆಸ್ ಶಾಸಕರ ಬಂಡಾಯದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಅವರು ವಿಶ್ವಾಸಮತಯಾಚನೆಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.

publive-image

ಇದನ್ನೂ ಓದಿ: ದಿಢೀರ್ ಹಿಮಾಚಲ ಪ್ರದೇಶಕ್ಕೆ ತೆರಳಿದ ಡಿಸಿಎಂ ಡಿ.ಕೆ ಶಿವಕುಮಾರ್; ಕಾರಣವೇನು?

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ನಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕಾದ ಒಂದು ಸ್ಥಾನವನ್ನು ಸೋತಿದೆ. ಈ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಿಎಂ ಸುಖವಿಂದರ್ ಸಿಂಗ್ ಅವರ ರಾಜೀನಾಮೆಗೆ ಒತ್ತಾಯ ಕೇಳಿ ಬಂದಿದೆ. ಕಾಂಗ್ರೆಸ್‌ ಹೈಕಮಾಂಡ್‌ನ ಸೂಚನೆ ಮೇರೆಗೆ ಮುಖ್ಯಮಂತ್ರಿ ರಾಜೀನಾಮೆಗೆ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜೈರಾಮ್ ಠಾಕೂರ್ ಅವರು ಸಿಎಂ ಸುಖವಿಂದರ್ ಸಿಂಗ್ ಅವರು ಈಗಾಗಲೇ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಆದರೆ ಸಿಎಂ ಕಚೇರಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.

Advertisment

ಹಿಮಾಚಲ ಪ್ರದೇಶದಲ್ಲಿ ಯಾರಿಗೆ ಎಷ್ಟು ಸ್ಥಾನ?
ಒಟ್ಟು - 68
ಕಾಂಗ್ರೆಸ್ - 40
ಬಿಜೆಪಿ - 25
ಇತರೆ - 03
ಬಹುಮತಕ್ಕೆ - 35

2022ರಲ್ಲಿ ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ 40, ಬಿಜೆಪಿ 25 ಸ್ಥಾನಗಳನ್ನು ಗೆದ್ದಿದೆ. ಒಟ್ಟು 68 ಸಂಖ್ಯಾಬಲದಲ್ಲಿ ಸರ್ಕಾರ ರಚಿಸಲು 35 ಸ್ಥಾನಗಳ ಅಗತ್ಯವಿದೆ.

publive-image

ಹಿಮಾಚಲ ಪ್ರದೇಶಕ್ಕೆ ಕೈ ನಾಯಕರು ದೌಡು!
ಹಿಮಾಚಲ ಪ್ರದೇಶದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ವೀಕ್ಷಕರು ಈಗಾಗಲೇ ರಾಜ್ಯಕ್ಕೆ ಆಗಮಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದು, ಸರ್ಕಾರ ಉಳಿಸುವ ಸರ್ಕಸ್ ಶುರುವಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾಂಗ್ರೆಸ್‌ನ 6 ಶಾಸಕರು ಈಗಾಗಲೇ ಬಿಜೆಪಿ ಪರ ವಾಲಿದ್ದಾರೆ. ಹೀಗಾಗಿ ಉಳಿದ ಶಾಸಕರನ್ನು ಹಿಡಿದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಉಳಿಸಲು ಡಿ.ಕೆ ಶಿವಕುಮಾರ್ ರಾಜಕೀಯ ತಂತ್ರಗಾರಿಕೆ ಹೆಣೆದಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment