/newsfirstlive-kannada/media/post_attachments/wp-content/uploads/2024/02/Dk-Shivakumar-HImachal-Pradesh.jpg)
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭುಗಿಲೆದ್ದ ಅಸಮಾಧಾನ ಹಾಗೂ ರಾಜಕೀಯ ಬಿಕ್ಕಟ್ಟಿಗೆ ಕಾಂಗ್ರೆಸ್ ನಾಯಕರು ಮೇಜರ್ ಟ್ವಿಸ್ಟ್ ಕೊಟ್ಟಿದ್ದಾರೆ. ಹಿಮಾಚಲ ಪ್ರದೇಶ ಸ್ಪೀಕರ್ 6 ಕಾಂಗ್ರೆಸ್ ಶಾಸಕರನ್ನ ಅನರ್ಹಗೊಳಿಸಿದ ಮಹತ್ವದ ಆದೇಶ ಹೊರಡಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ 6 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಅಡ್ಡ ಮತದಾನ ಮಾಡಿದ್ದರು.
ಹಿಮಾಚಲ ಪ್ರದೇಶ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಪಕ್ಷಾಂತರ ವಿರೋಧಿ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ನಾನು ನನ್ನ ಕ್ರಮ ಕೈಗೊಂಡಿದ್ದೇನೆ. ಅನರ್ಹ ಶಾಸಕರು ಬೇಕಿದ್ರೆ ಕೋರ್ಟ್ ಮೆಟ್ಟಿಲೇರಲಿ ಎಂದು ಸ್ಪಷ್ಟಪಡಿಸಿದ್ದಾರೆ. ಈ ಹಿಂದಿನ ಕೋರ್ಟ್ ಆದೇಶದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ಯಾರಿಗೆ ಬೇಕಾದ್ರು ಮತ ಚಲಾಯಿಸಬಹುದು ಎನ್ನಲಾಗಿದೆ. ಅದಕ್ಕೆ ಪಕ್ಷದ ವಿಪ್ ಮಾನ್ಯ ಆಗುವುದಿಲ್ಲ. ಸ್ಪೀಕರ್ ಆದೇಶದ ಹಿನ್ನೆಲೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಕೋರ್ಟ್ ಮೆಟ್ಟಿಲೇರಲೇರುವ ಸಾಧ್ಯತೆ ಇದೆ.
ಇದನ್ನೂ ಓದಿ: ರಾಜೀನಾಮೆ ಕೊಟ್ರಾ ಹಿಮಾಚಲ ಪ್ರದೇಶ ಸಿಎಂ? ಕಾಂಗ್ರೆಸ್ ಸರ್ಕಾರ ಉಳಿಸಲು ಡಿಕೆಶಿ ಸರ್ಕಸ್
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಈ ಸರ್ಕಾರಕ್ಕೆ ಬಹುಮತ ಇಲ್ಲ ಎಂದು ಆರೋಪ ಮಾಡಿದ್ದರು. ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದಾದ ಮೇಲೆ ಸಚಿವರು ಸೇರಿದಂತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡುವ ಭೀತಿ ಎದುರಾಗಿತ್ತು.
/newsfirstlive-kannada/media/post_attachments/wp-content/uploads/2024/02/Dk-Shivakumar-HImachal-Pradesh-1.jpg)
ಹಿಮಾಚಲ ಪ್ರದೇಶದಲ್ಲಿ ಎದುರಾದ ಈ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಿನ್ನೆಯೇ ಶಿಮ್ಲಾಗೆ ಭೇಟಿ ನೀಡಿದ್ದರು. ಕಾಂಗ್ರೆಸ್ ನಾಯಕರ ಜೊತೆ ಮಹತ್ವದ ಮಾತುಕತೆ ನಡೆಸಿರುವ ಡಿಕೆ ಶಿವಕುಮಾರ್ ಅವರು ಸಚಿವರು, ಶಾಸಕರ ಮನವೊಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಉಳಿಸುವ ಕಾರ್ಯತಂತ್ರದಲ್ಲಿ ಕಾಂಗ್ರೆಸ್ ನಾಯಕರು ಇದೀಗ ಅಡ್ಡ ಮತದಾನ ಮಾಡಿದ ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಸದ್ಯ ಕಾಂಗ್ರೆಸ್ ಸರ್ಕಾರವನ್ನು ಉಳಿಸೋ ರಣತಂತ್ರದಲ್ಲಿ ಕಾಂಗ್ರೆಸ್ ನಾಯಕರು ಮೇಲುಗೈ ಸಾಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us