/newsfirstlive-kannada/media/post_attachments/wp-content/uploads/2024/09/BNG_ACCIDENT_BOYS.jpg)
ಬೆಂಗಳೂರು: ಹಿಟ್ ಆ್ಯಂಡ್ ರನ್​ಗೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಡರಾತ್ರಿ ಏರ್ಪೋಟ್ ರಸ್ತೆಯ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಎಸ್​ಸಿ ವ್ಯಾಸಂಗ ಮಾಡುತ್ತಿದ್ದ ರೋಹಿತ್ ( 22 ), ಸುಚಿತ್ ( 22 ), ಹರ್ಷಾ ( 22 ) ಮೃತ ವಿದ್ಯಾರ್ಥಿಗಳು. ಇವರೆಲ್ಲ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಬಿಎಸ್​ಸಿ ವ್ಯಾಸಂಗ ಮಾಡುತ್ತಿದ್ದರು. ರಾತ್ರಿ ವೇಳೆ ಲಾಂಗ್ ಡ್ರೈವಿಂಗ್ ಎಂದು ಬೈಕ್​​ನಲ್ಲಿ ಹೋಗಿದ್ದರು. ಈ ವೇಳೆ ಯಾವುದೋ ಅಪರಿಚಿತ ಕಾರು ಡಿಕ್ಕಿ ಹೊಡೆದು ನಿಲ್ಲಿಸದೇ ಹೋಗಿದೆ. ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
/newsfirstlive-kannada/media/post_attachments/wp-content/uploads/2024/09/BNG_ACCIDENT.jpg)
ಅಪಘಾತದ ರಭಸಕ್ಕೆ ರಸ್ತೆಯಲ್ಲಿ ಮೃತದೇಹಗಳು ಗುರುತು ಸಿಗದಂತೆ ಆಗಿವೆ. ಈ ಆಕ್ಸಿಡೆಂಟ್​ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನಡೆದಿರಬಹುದೆಂದು ತಿಳಿದು ಬಂದಿದೆ. ಬೈಕ್​ಗೆ ಡಿಕ್ಕಿ ಹೊಡೆದ ಕಾರು ಡ್ರೈವರ್​ ಗಾಡಿ ಸಮೇತ ಪರಾರಿಯಾಗಿದ್ದಾನೆ. ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಚಿಕ್ಕಜಾಲ ಗ್ರಾಮದ ಬಳಿ ಈ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us