Advertisment

ಕರಾವಳಿಯಲ್ಲಿ ಮತ್ತೆ ಮಳೆಯ ಆರ್ಭಟ.. ಈ 5 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

author-image
Ganesh
Updated On
ಭಾರೀ ಮಳೆ.. ರಾಜ್ಯದ ಈ ಭಾಗದ ಶಾಲೆಗಳಿಗೆ ರಜೆ ಘೋಷಣೆ
Advertisment
  • ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಹಿನ್ನೆಲೆ
  • ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ
  • ಮುಂಜಾಗೃತ ಕ್ರಮವಾಗಿ ಮತ್ತೆ ರಜೆ ನೀಡಿ‌ ಆದೇಶ

ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ಮತ್ತೆ ವ್ಯಾಪಕ ಮಳೆ ಶುರುವಾಗಿದ್ದು, ಐದು ತಾಲೂಕುಗಳ ಶಾಲಾ‌-ಕಾಲೇಜಿಗೆ ರಜೆ ಘೋಷಣೆಯಾಗಿದೆ.

Advertisment

ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಈ ಆದೇಶ ನೀಡಿದ್ದಾರೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಕಳೆದ ಐದಾರು ದಿನಗಳಿಂದ ಕೊಂಚ ಬ್ರೇಕ್ ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ.

ಇದನ್ನೂ ಓದಿ:Landslide: 5 ವರ್ಷದ ಹಿಂದೆ ಕೇರಳ ಪುತ್ತುಮಲೆ ದುರಂತ.. ಅದೇ ಜಾಗದಿಂದ 2 ಕಿಮೀ ದೂರದಲ್ಲಿ ಪರ್ವತ ಪ್ರವಾಹ..!

ಮಳೆಯಿಂದಾಗಿ ಭಾರೀ ಅನಾಹುತ ಆಗುವ ಸೂಚನೆ ಹಿನ್ನೆಲೆಯಲ್ಲಿ, ಮುಂಜಾಗೃತ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನು ಘಟ್ಟದ ಮೇಲಿನ ತಾಲೂಕುಗಳಿಗೆ ರಜೆ ಇಲ್ಲ. ಎಂದಿನಂತೆ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸಲಿವೆ.

Advertisment

ಇದನ್ನೂ ಓದಿ:ಕೇರಳ ಗುಡ್ಡ ಕುಸಿತದಲ್ಲಿ ಕರ್ನಾಟಕದ ಅಜ್ಜಿ, ಮೊಮ್ಮಗ ನಾಪತ್ತೆ.. ಇದೇ ಕುಟುಂಬದ ಮೂವರ ರೋಚಕ ರಕ್ಷಣೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment