ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ
ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ
ಆರೆಂಜ್ ಅಲರ್ಟ್ ಘೋಷಣೆ ಮಾಡಿದ ಹವಾಮಾನ ಇಲಾಖೆ
ಮಂಗಳೂರು: ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇಂದು ಕೂಡ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಿರುವಾಗ ಜಿಲ್ಲೆಯ ಐದು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾದ್ಯಂತ ವರುಣಾರ್ಭಟ ಮುಂದುವರೆಯುವ ಹಿನ್ನೆಲೆಯಲ್ಲಿ ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಉಳಿದೆಡೆ ತಹಶೀಲ್ದಾರ್ ಗಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಲಾಗಿದೆ. ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಾಲೂಕು ತಹಶೀಲ್ದಾರ್ ಗಳು ರಜೆ ಘೋಷಿಸಲು ಸೂಚನೆ ಕೊಡಲಾಗಿದೆ. ಇನ್ನು ಹವಾಮಾನ ಇಲಾಖೆ ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ