newsfirstkannada.com

‘ಮಲಗಿದ್ದ ಯುವತಿಗೆ ಚಾಕುವಿನಿಂದ ಇರಿದು ಕೊಂದಿದ್ದ ಕೇಸ್​​​ ಸಿಐಡಿಗೆ’- ಗೃಹ ಸಚಿವ ಪರಮೇಶ್ವರ್​​

Share :

Published May 20, 2024 at 7:45pm

    ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದ ಯುವಕ

    ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿಯ ಬರ್ಬರ ಕೊಲೆ

    ಹುಬ್ಬಳ್ಳಿ ಯುವತಿ ಕೊಲೆ ಕೇಸ್​ ಬಗ್ಗೆ ಗೃಹ ಸಚಿವ ಪರಮೇಶ್ವರ್​ ಹೇಳಿದ್ದೇನು?

ನೇಹಾ ಹಿರೇಮಠ್ ಬರ್ಬರ ಹತ್ಯೆ ಕೇಸ್‌ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಭಯಾನಕ ಕೊಲೆಯಾಗಿತ್ತು. ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಪರಾರಿಯಾಗಿದ್ದ ಆರೋಪಿ ಗಿರೀಶ್ ಕಾಲಿ​ಗೆ ಗುಂಡು ಹಾರಿಸಿ ಪೊಲೀಸರು ಲಾಕ್ ಮಾಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯ ಅಂಜಲಿ ಬರ್ಬರ ಹತ್ಯೆ ಕೇಸ್‌ಗೆ ಹೊಸ ಟ್ವಿಸ್ಟ್‌.. ಕೊಲೆಗೆ ಕಾರಣವೇನು? ಅಸಲಿಗೆ ಆಗಿದ್ದೇನು?

ಸದ್ಯ ಮೃತ ಅಂಜಲಿ ನಿವಾಸಕ್ಕೆ ರಾಜಕೀಯ ನಾಯಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ. ಇನ್ನು, ಇಂದು ಮೃತ ಯುವತಿ ಮನೆಗೆ ಎಡಿಜಿಪಿ ಹಿತೇಂದ್ರ ಭೇಟಿ ಕೊಟ್ಟಿದ್ದರು. ಈ ಕೇಸ್​​ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಪಡೆದುಕೊಂಡು ಅವಳಿ ನಗರದಲ್ಲಿ ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳ ಸಂಬಂಧ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬೆನ್ನಲ್ಲೇ ಈಗ ಗೃಹಸಚಿವ ಪರಮೇಶ್ವರ್​ ಅವರು ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಅಂಜಲಿ ಅಂಬಿಗೇರ್‌ ಹತ್ಯೆ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಆರೋಪಗಳು ಕೇಳಿ ಬಂದ ನಂತರ ಸರ್ಕಾರ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿದೆ. ಗೃಹಸಚಿವ ಪರಮೇಶ್ವರ್​ ಹುಬ್ಬಳ್ಳಿಗೆ ಆಗಮಿಸಿ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲಿಸಲಿದ್ದಾರೆ. ಅಲ್ಲದೇ ಅಂಜಲಿ ಅಂಬಿಗೇರ್‌ ನಿವಾಸಕ್ಕೂ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. ಜೊತೆಗೆ ಅಂಜಲಿ ಹತ್ಯೆ ಕೇಸ್​ ಸಿಐಡಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಇನ್ನು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ಗೃಹ ಸಚಿವ ಜಿ. ಪರಮೇಶ್ವರ ಅವರು, ಮೊನ್ನೆ ಮೊನ್ನೆಯಷ್ಟೇ 21 ವರ್ಷದ ಅಂಜಲಿ ಕೊಲೆಯಾಗಿದೆ. ಗಿರೀಶ್ ಸಾವಂತ ಅನ್ನೋ ವ್ಯಕ್ತಿ ಕೊಲೆ ಮಾಡಿದ್ದಾನೆ. ಈ ಕೇಸ್ ಕೂಡಾ ಸಿಐಡಿಗೆ ಕೊಡ್ತೀವಿ. ಅಂಜಲಿ ಕೊಲೆ ಕೇಸ್ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ. ಇದು ಕೂಡಾ ಗಂಭೀರ ಕೇಸ್​ ಆಗಿದೆ ಎಂದು ಹೇಳಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಮಲಗಿದ್ದ ಯುವತಿಗೆ ಚಾಕುವಿನಿಂದ ಇರಿದು ಕೊಂದಿದ್ದ ಕೇಸ್​​​ ಸಿಐಡಿಗೆ’- ಗೃಹ ಸಚಿವ ಪರಮೇಶ್ವರ್​​

https://newsfirstlive.com/wp-content/uploads/2024/05/parameshwar.jpg

Load More