newsfirstkannada.com

ಐವರು ಶಂಕಿತ ಉಗ್ರರು ಅರೆಸ್ಟ್‌; ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದೇನು?

Share :

19-07-2023

    ಬೆಂಗಳೂರಲ್ಲಿ ಭಾರೀ ಸ್ಫೋಟಕ್ಕೆ ಪ್ಲಾನ್

    ಕೇಸ್​ನಲ್ಲಿ ಐವರು ಶಂಕಿತ ಉಗ್ರರು ಅರೆಸ್ಟ್‌

    ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಏನಂದ್ರು?

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎನ್ನಲಾದ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ರಾಜ್ಯ ಸಿಸಿಬಿ ಪೊಲೀಸರು ​ಕಾನೂನುಬಾಹಿರ ಚಟುವಟಿಕೆ ನಿಗ್ರಹ ಕಾಯ್ದೆ (UAPA) ಅಡಿ ಕೇಸ್​ ದಾಖಲಿಸಿ ಬಂಧಿತ ಶಂಕಿತ ಉಗ್ರರನ್ನು ಕೋರ್ಟ್​​ ಮುಂದೆ ಹಾಜರುಪಡಿಸಿದ್ದಾರೆ. ಜತೆಗೆ 15 ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಂದು ಮನವಿ ಮಾಡಿದ್ದಾರೆ.

ಇನ್ನು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಬಂಧಿತ ಶಂಕಿತ ಉಗ್ರರು ಕೆಲವು ವಿಧ್ವಂಸಕ ಕೃತ್ಯಗಳು ಎಸಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐವರನ್ನು ಅರೆಸ್ಟ್​ ಮಾಡಲಾಗಿದೆ. ಇದು ಬೆಂಗಳೂರು ಮಟ್ಟಿಗೆ ಬಹಳ ಅಪಾಯಕಾರಿ. ಇವರಿಗೆ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನೊಂದಿಗೆ ಲಿಂಕ್​​ ಇತ್ತು ತಿಳಿದು ಬಂದಿದೆ ಎಂದರು.

ಎನ್​​ಐಎ ತನಿಖೆ ಒಪ್ಪಿಸುವ ಬಗ್ಗೆ ಯೋಚಿಸೋಣ

ನಾವು ಈಗಲೇ ಬಂಧಿತರನ್ನು ಉಗ್ರರು ಎಂದು ಹೇಳಲು ಸಾಧ್ಯವಿಲ್ಲ. ನಮ್ಮ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇವರು ಯಾಕೆ ವಾಕಿಟಾಕಿ ಬಳಸುತ್ತಿದ್ದರು? ಪೊಲೀಸರ ಬಂದ ಕೂಡಲೇ ಅದನ್ನು ವಿರೂಪಗೊಳಿಸಿದ್ದೇಕೆ? ಎನ್ನುವುದು ಗೊತ್ತಿಲ್ಲ. ಮೊದಲು ನಮ್ಮ ಪೊಲೀಸರು ತನಿಖೆ ನಡೆಸಲಿ. ಬಳಿಕ ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡುವ ಬಗ್ಗೆ ಯೋಚಿಸೋಣ ಎಂದರು.

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ

ಐವರು ಶಂಕಿತ ಉಗ್ರರು ಅರೆಸ್ಟ್‌; ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದೇನು?

https://newsfirstlive.com/wp-content/uploads/2023/07/Parameshwar.jpg

Load More