newsfirstkannada.com

ಹೈಕೋರ್ಟ್ ನ್ಯಾ. ಬಿ. ವೀರಪ್ಪ ನಿವೃತ್ತಿ; ಪ್ರೀತಿಯಿಂದ ಬೀಳ್ಕೊಡುಗೆ ಕೊಟ್ಟ ಸಿಎಂ ಸಿದ್ದು, ಡಿಸಿಎಂ ಡಿಕೆಶಿ

Share :

31-05-2023

    ಎಸಿಬಿ ರದ್ದು ಮಾಡಿ ಲೋಕಾಯುಕ್ತಕ್ಕೆ ಬಲ ನೀಡಿದ ನ್ಯಾಯಮೂರ್ತಿ

    ಶ್ರೀನಿವಾಸಪುರ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಹೈಕೋರ್ಟ್‌ವರೆಗೆ

    ಹೈಕೋರ್ಟ್‌ ನ್ಯಾಯಮೂರ್ತಿ ಬಿ.ವೀರಪ್ಪರಿಗೆ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಗಳಾದ ಶ್ರೀ. ಬಿ ವೀರಪ್ಪ ಅವರು ಸೇವೆಯಿಂದ ನಿವೃತ್ತಿ ಆಗಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಬೆಂಗಳೂರು ವಕೀಲರ ಸಂಘ ಬಿ. ವೀರಪ್ಪ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಬೀಳ್ಕೊಡುಗೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಸಿಜೆ ಪಿ.ಬಿ.ವರಾಳೆ, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಸೇರಿ ಹಲವು ನ್ಯಾಯಮೂರ್ತಿಗಳು ಭಾಗಿಯಾಗಿದ್ದರು.

ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಎಸಿಬಿ ರದ್ದು ಮಾಡಿ ಲೋಕಾಯುಕ್ತಕ್ಕೆ ಬಲ ನೀಡಿದ ಆದೇಶದ ಮೂಲಕ ಹೆಸರುವಾಸಿಯಾಗಿದ್ದರು. ಬಿ. ವೀರಪ್ಪ ಅವರು ಜೂನ್ 1, 1961ರಂದು ಶ್ರೀನಿವಾಸಪುರದ ನಾಗದೇನಹಳ್ಳಿಯಲ್ಲಿ ಜನಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿದ ವೀರಪ್ಪನವರು ಕೋಲಾರದ ಸರ್ಕಾರಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದರು. ನಂತರ ಬೆಂಗಳೂರಿನ ರೇಣುಕಾಚಾರ್ಯ ಕಾನೂನು ಕಾಲೇಜಿನಲ್ಲಿ LLB ಮುಗಿಸಿದರು.

1988ರಲ್ಲಿ ಬೆಂಗಳೂರಿನ ಹಿರಿಯ ವಕೀಲರಾದ ಪ್ರೊ.ಎಂ.ಎಸ್.ಗೋಪಾಲ್ ಅವರ ಕಚೇರಿಯಲ್ಲಿ ಜ್ಯೂನಿಯರ್ ಆಗಿ ಅಭ್ಯಾಸವನ್ನು ಪ್ರಾರಂಭಿಸಿದರು. 1995 ರಂದು ಸರ್ಕಾರಿ ಪ್ಲೀಡರ್ ಆಗಿ ನೇಮಕವಾದರು. 2005ರವರೆಗೆ ಹೆಚ್ಚುವರಿ ಸರ್ಕಾರಿ ವಕೀಲರಾಗಿ ಕಾರ್ಯ ನಿರ್ವಹಿಸಿದರು. 2015ರವರೆಗೆ ಸರ್ಕಾರಿ ವಕೀಲರಾಗಿ ಕಾರ್ಯ ನಿರ್ವಹಿಸಿದರು.

ಬಿ. ವೀರಪ್ಪ ಅವರು ಜನವರಿ 2, 2015ರಂದು ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾದರು. ಡಿಸೆಂಬರ್ 30, 2016 ರಂದು ಖಾಯಂ ನ್ಯಾಯಾಮೂರ್ತಿಯಾಗಿದ್ದ ವೀರಪ್ಪ ಅವರು 8 ವರ್ಷಗಳ ಕಾಲ ಹೈಕೋರ್ಟ್ ನ್ಯಾಯಾಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹೈಕೋರ್ಟ್ ನ್ಯಾ. ಬಿ. ವೀರಪ್ಪ ನಿವೃತ್ತಿ; ಪ್ರೀತಿಯಿಂದ ಬೀಳ್ಕೊಡುಗೆ ಕೊಟ್ಟ ಸಿಎಂ ಸಿದ್ದು, ಡಿಸಿಎಂ ಡಿಕೆಶಿ

https://newsfirstlive.com/wp-content/uploads/2023/05/sidda-1.jpg

Load More