/newsfirstlive-kannada/media/post_attachments/wp-content/uploads/2024/04/Gadaga.jpg)
ಗದಗ: ಮಲಗಿದಲ್ಲೇ ನಾಲ್ಕು ಜನರ ಭೀಕರ ಹತ್ಯೆಗೈದ ಪ್ರಕರಣವೊಂದು ಗದಗ ನಗರದ ದಾಸರ ಓಣಿಯಲ್ಲಿ ಬೆಳಕಿಗೆ ಬಂದಿದೆ. ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಲಾಗಿದೆ.
ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರನ್ನು ಕೊಲೆ ಮಾಡಲಾಗಿದೆ. ಉಪಾಧ್ಯಕ್ಷೆ ಸುನಂದಾ ಬಾಕಳೆ, ಪುತ್ರ ಕಾರ್ತಿಕ್ ಬಾಕಳೆ 27, ಪರಶುರಾಮ 55, ಪತ್ನಿ ಲಕ್ಷ್ಮೀ 45, ಪುತ್ರಿ ಆಕಾಂಕ್ಷಾ 16 ಕೊಲೆಯಾದವರು.
ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಈ ಮೂವರು ಕೊಪ್ಪಳ ಮೂಲದವರು. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಕಾರ್ಯಕ್ರಮಕ್ಕಾಗಿ ಸಂಬಧಿಗಳು ಆಗಮಿಸಿದ್ದರು. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಕುಟುಂಬಸ್ಥರು ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡ್ತಾಯಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.
/newsfirstlive-kannada/media/post_attachments/wp-content/uploads/2024/04/Gadaga-1.jpg)
ಇದನ್ನೂ ಓದಿ: PG 2ನೇ ಮಹಡಿಯಿಂದ ಬಿದ್ದು ಮಹಿಳಾ ಯೂಟ್ಯೂಬರ್​ ಮಹಿಳೆ ಸಾವು; ಹಲವು ಅನುಮಾನ
ಮನೆ ಮಾಲೀಕ ಪ್ರಕಾಶ್ ಬಾಕಳೆ ಬಾಗಿಲು ತೆಗೆದಿದ್ರೆ ನಮ್ಮನ್ನು ಕೊಲೆ ಮಾಡುತ್ತಿದ್ರು ಎಂದು ಹೇಳಿದ್ದಾರೆ.
ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ ನಡೆಯುತ್ತಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us