ಬೆಂಗಳೂರಲ್ಲಿ ನಡೀತು ಅಮಾನುಷ ಕೃತ್ಯ
ಪಾಠ ಮಾಡುವ ಮೇಷ್ಟ್ರು ವಿರುದ್ಧವೇ ಆರೋಪ
ಮಗಳ ಮೈಮೇಲೆ ಅಂಟಿದ ರಕ್ತದ ಕಲೆ ತಿಳಿಸಿದ ಸತ್ಯ
ಬೆಂಗಳೂರು: ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರತಿಷ್ಠಿತ ಖಾಸಗಿ ಶಾಲೆ ಒಂದರ ಪ್ರಾಂಶುಪಾಲನೊಬ್ಬ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ.
ಆರೋಪ ಬೆನ್ನಲ್ಲೇ ವರ್ತೂರು ಸಮೀಪದ ಖಾಸಗಿ ಶಾಲೆಗೆ ಭೇಟಿ ನೀಡಿ ತನಿಖೆ ಶುರು ಮಾಡಿದ್ದಾರೆ. ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲರಿಂದಲೇ ಕೃತ್ಯ ನಡೆಸಿರುವ ಆರೋಪ ಕೇಳಿಬಂದಿದೆ. ನಿನ್ನೆ ಎಂದಿನಂತೆ ಬಾಲಕಿ ಶಾಲೆಗೆ ತೆರಳಿದ್ದಳು. ಈ ವೇಳೆ ಶಾಲೆಯ ಖಾಲಿ ರೂಮಿಗೆ ಕರೆದೊಯ್ದು ಪ್ರಾಂಶುಪಾಲ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪ ಪ್ರಕರಣ ಸಂಬಂಧ ವರ್ತೂರು ಠಾಣೆ ಪೊಲೀಸರು ಆರೋಪಿ ಪ್ರಾಂಶುಪಾಲರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಏನಿದು ಆರೋಪ..?
ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಗು ನರದೌರ್ಬಲ್ಯ( Mild Dyslexia oct) ಕಾಯಿಲೆಯಿಂದ ಬಳಲುತ್ತಿದ್ದಾಳೆ ಎನ್ನಲಾಗಿದೆ. ನಿನ್ನೆ ಬೆಳಗ್ಗೆ 8.30 ಕ್ಕೆ ಎಂದಿನಂತೆ ಮನೆಯಿಂದ ಶಾಲೆಗೆ ವಿದ್ಯಾರ್ಥಿನಿ ತೆರಳಿದ್ದಳು. ಮಧ್ಯಾಹ್ನ 3.30ಕ್ಕೆ ಶಾಲೆಯಿಂದ ಮನೆಗೆ ವಾಪಸ್ ಆಗಿದ್ದಾಳೆ. ಮನೆಗೆ ಬರುತ್ತಿದ್ದಂತೆಯೇ ತಾಯಿ ಬಳಿ ಹೊಟ್ಟೆ ನೋವು ಎಂದು ಹೇಳಿಕೊಂಡಿದ್ದಾಳೆ.
ನಂತರ ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಈ ವಿಚಾರವಾಗಿ ಮಗುವಿನ ಬಳಿ ತಾಯಿ ಕೇಳಿಕೊಂಡಿದ್ದಾಳೆ. ಆ ಸಂದರ್ಭದಲ್ಲಿ ಬಾಲಕಿ ಪ್ರಾಂಶುಪಾಲನ ಕೃತ್ಯದ ಬಗ್ಗೆ ವಿವರಿಸಿದ್ದಾಳೆ. ಮೊದಲು ಪ್ರಾಂಶುಪಾಲರ ಕೊಠಡಿಗೆ ಕರೆದುಕೊಂಡು ಹೋದ ಕಾಮುಕ, ವಿಶ್ರಾಂತಿ ಪಡೆಯುವಂತೆ ಹೇಳಿ ಲೈಂಗಿಕದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ. ನಂತರ ಮಗುವಿಗೆ ಕೇಕ್ ತಿನ್ನಿಸಿ ಕಳುಹಿಸಿದ್ದಾರೆ ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ