ರಾಜ್ಯದಲ್ಲಿ ರಣ ಬಿಸಿಲಿನ ವಾತಾವರಣ.. ಗರಿಷ್ಠ ತಾಪಮಾನ ಎಲ್ಲೆಲ್ಲಿ? ಎಲ್ರೂ ಎಚ್ಚರದಿಂದ ಇರಲೇಬೇಕು!

author-image
admin
Updated On
ಅಬ್ಬಬ್ಬಾ.. 3 ವಾರದಲ್ಲಿ ಬೆಂಗಳೂರಿನ 7,324 ಮಂದಿಗೆ ಅತಿಸಾರ ಸಮಸ್ಯೆ; ಮುನ್ನೆಚ್ಚರಿಕಗಳೇನು?
Advertisment
  • ರಾಜ್ಯದಲ್ಲಿ ಮನೆಯಿಂದ ಆಚೆ ಬರಲು ಹಿಂದೇಟು ಹಾಕುವ ಸ್ಥಿತಿ
  • ಮಧ್ಯಾಹ್ನ 12ರಿಂದ 3ಗಂಟೆಯವರೆಗೆ ಈ ತಪ್ಪು ಮಾಡಲೇ ಬೇಡಿ!
  • ಮುಂದಿನ ದಿನಗಳಲ್ಲಿ ಈ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ

ಬೆಂಗಳೂರು: ಅಬ್ಬಾ.. ರಾಜ್ಯಾದ್ಯಂತ ನೆತ್ತಿ ಸುಡುವ ಬಿಸಿಲು ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ. ರಾಯಚೂರಿನಲ್ಲಂತೂ ಸುಡುತ್ತಿರುವ ರಣ ಬಿಸಿಲಿಗೆ ಜನರು ಮನೆಯಿಂದ ಆಚೆ ಬರಲು ಹಿಂದೇಟು ಹಾಕುವ ಪರಿಸ್ಥಿತಿ ಎದುರಾಗಿದೆ. ರಾಯಚೂರು ಮಾತ್ರವಲ್ಲ 6 ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರುತ್ತಲೇ ಇದೆ.

ಕಳೆದ 24 ಗಂಟೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ 41.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಇದು ರಾಜ್ಯದಲ್ಲೇ ಅತ್ಯಧಿಕ ಉಷ್ಣ ವಾತಾವರಣ. ಹೆಚ್ಚುತ್ತಿರುವ ಬಿಸಿಲಿನಿಂದ ರಾಯಚೂರು ಜನ‌ ಕಂಗಾಲಾಗಿದ್ದಾರೆ.
ಬೆಂಗಳೂರಲ್ಲಿ ಸರಾಸರಿ 34.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ವಿಜಯಪುರ, ರಾಯಚೂರು, ಬೆಳಗಾವಿ, ಗದಗ, ಕೊಪ್ಪಳ ಸೇರಿದಂತೆ ಹಲವೆಡೆ 37 ಡಿಗ್ರಿ ಸೆಲ್ಸಿಯಸ್‌, ಚಾಮರಾಜನಗರ, ಹಾವೇರಿ, ಧಾರವಾಡ ಸೇರಿದಂತೆ ಹಲವೆಡೆ 36 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

publive-image

6 ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ!
ರಾಯಚೂರಿನ ಜೊತೆಗೆ ರಾಜ್ಯದ 6 ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿಯನ್ನು ದಾಟಿದೆ. ಕೊಪ್ಪಳದಲ್ಲಿ 40.7 ಡಿ.ಸೆ, ಉತ್ತರ ಕನ್ನಡ ಮತ್ತು ಧಾರವಾಡದಲ್ಲಿ 40.5 ಡಿ.ಸೆ, ಕಲಬುರಗಿ 40.04 ಡಿ.ಸೆ ಹಾಗೂ ಬಾಗಲಕೋಟೆ 40.1 ಡಿ.ಸೆ ತಾಪಮಾನ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಈ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ: ಬಿಸಿಲು ಎಂದು AC ಮೊರೆ ಹೋಗೋ ಮುನ್ನ ಎಚ್ಚರ! ಇದು ಎಷ್ಟು ಡೇಂಜರ್​​​ ಗೊತ್ತಾ? 

ಇಂತಹ ವಾತಾವರಣದಲ್ಲಿ ಮಧ್ಯಾಹ್ನ 12ರಿಂದ 3ಗಂಟೆಯವರೆಗೆ ಕೆಲಸ ಮಾಡುವುದು ಸಿಕ್ಕಾಪಟ್ಟೆ ತ್ರಾಸವಾಗಿದೆ. ಮಿತಿ ಮೀರಿದ ಬಿಸಿಲಿಗೆ ತಲೆನೋವು, ವಾಂತಿ, ಒಣತ್ವಚೆ ಮತ್ತು ಆರೋಗ್ಯದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಆದಷ್ಟು ನೀರು ಮತ್ತು ಹಣ್ಣಿನ ಜ್ಯೂಸ್ ಸೇವಿಸುವುದು ಉತ್ತಮವಾಗಿದೆ.

publive-image

ರಾಜ್ಯಕ್ಕೆ ಮಳೆ ಬರೋದು ಯಾವಾಗ?
ರಾಜ್ಯದಲ್ಲಿ ತಾಪಮಾನ ಏರಿಕೆ ನಡುವೆಯೇ ಒಂದು ಖುಷಿ ಸುದ್ದಿಯೂ ಕೂಡ ಇದೆ. ರಾಜ್ಯದ ಹಲವು ಭಾಗಗಳಲ್ಲಿ ಸುಡುವ ಬೇಸಿಗೆಯಲ್ಲೂ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮಾರ್ಚ್‌ 14ರ ಒಳಗೆ ರಾಜ್ಯದಲ್ಲಿ ಬೇಸಿಗೆ ಮಳೆಯಾಗುವ ಮುನ್ಸೂಚನೆಯನ್ನು ಕೊಟ್ಟಿದೆ.

ಇಂದಿನಿಂದ ಪೂರ್ವ ಮುಂಗಾರು ಮಾರುತ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಮಾರ್ಚ್14ರ ಒಳಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳು, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು & ಚಾಮರಾಜನಗರ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment