Advertisment

ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ.. ಗಂಡನ ಮೇಲೆ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ್ದಾನೆ ಎಂಬ ಆರೋಪ

author-image
AS Harshith
Updated On
ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ.. ಗಂಡನ ಮೇಲೆ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ್ದಾನೆ ಎಂಬ ಆರೋಪ
Advertisment
  • ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿರುವ ಪತಿ
  • ಅಂತ್ಯಕ್ರಿಯೆ ತಡೆದು ಶವ ಪರೀಕ್ಷೆಗೆ ಸಾಗಿಸಿದ ಗೃಹಿಣಿ ಮನೆಯವರು
  • ಗಂಡನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ ಎಂಬ ಆರೋಪ

ಚಿಕ್ಕಮಗಳೂರು: ಗೃಹಿಣಿಯೊಬ್ಬಳು ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿ ಮನೆಯವರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿರುವ ಘಟನೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಗೃಹಿಣಿ ಪೋಷಕರು ಪತಿ ದರ್ಶನ್​ ವಿರುದ್ಧ ಕೊಲೆ ಆರೋಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisment

ಶ್ವೇತಾ (31) ಎಂಬಾಕೆ ಪತಿ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಳು. ಪತಿ ಮನೆಯವರು ತರಾತುರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ದತೆ ನಡೆಸಿದ್ದರು. ಆದರೆ ಗೃಹಿಣಿ ಮನೆಯವರು ಅಂತ್ಯಕ್ರಿಯೆ ತಡೆದು ಶವವನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ರವಾನಿಸಿ ಶವ ಪರೀಕ್ಷೆಗೆ ಸಾಗಿಸಿದ್ದಾರೆ.

ಶ್ವೇತಾ ಪತಿ ದರ್ಶನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ಗೃಹಿಣಿ ಮನೆಯವರು ಆತನ ಮೇಲೆ​ ಇಂಜೆಕ್ಷನ್ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಮೂರು ವರ್ಷದ ಹಿಂದೆ ದರ್ಶನ್ ಮತ್ತು ಶ್ವೇತಾ ವಿವಾಹವಾಗಿದ್ದರು. ಕಳೆದ ನಾಲ್ಕು ದಿನದ ಹಿಂದೆ ಬೆಂಗಳೂರಿನಿಂದ ದೇವವೃಂದಕ್ಕೆ ಆಗಮಿಸಿದ್ದರು. ಆದರೆ ಶ್ವೇತಾ ಇದ್ದಕ್ಕಿಂದ್ದತೆಯೇ ಮನೆಯಲ್ಲಿಯೇ ಸಾವನ್ನಪ್ಪಿದ್ದಾಳೆ. ಪತಿ ದರ್ಶನ್​ ಪತ್ನಿಯ ಪೋಷಕರಿಗೆ ಕರೆ ಮಾಡಿ ಹಾರ್ಟ್ ಅಟ್ಯಾಕ್ ಆಗಿದೆ ಎಂದು ಹೇಳಿದ್ದಾನೆ.

Advertisment

ಇನ್ನು ದರ್ಶನ್ ವಿರುದ್ಧ ಅನೈತಿಕ ಸಂಬಂಧದ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಗೃಹಿಣಿ ಮನೆಯವರು ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ ಮಾಡಿರುವ ಆರೋಪಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment