/newsfirstlive-kannada/media/post_attachments/wp-content/uploads/2024/07/KWR-RAIN-5-1.jpg)
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ, ಉತ್ತರ ಒಳನಾಡು, ಮಲೆನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ಕೊಟ್ಟಿದೆ.
ಇಂದಿನಿಂದ 5 ದಿನಗಳವರೆಗೆ ಮಳೆ ಮುಂದುವರಿಯಲಿದೆ. ಇಂದು, ನಾಳೆ ಕರಾವಳಿಗೆ ರೆಡ್ ಅಲರ್ಟ್ ವಿಸ್ತರಣೆ ಆಗಲಿದೆ. ಕಳೆದ ಒಂದು ವಾರದಿಂದ ಕರಾವಳಿ ಭಾಗದಲ್ಲಿ ಮಳೆ ಭಾರೀ ಅಬ್ಬರಿಸುತ್ತಿದೆ. ಹೀಗಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು.. ಕನ್ನಡತಿ ಶ್ರೇಯಂಕಾ ಪಾಟೀಲ್ ಶೈನ್
ಉತ್ತರ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ರೆ, ಬೀದರ್, ಯಾದಗಿರಿ, ಕಲಬುರಗಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಇನ್ನು ದಕ್ಷಿಣ ಒಳನಾಡಿಗೆ ಇಂದು ನಾಳೆ ರೆಡ್ ಅಲರ್ಟ್ ಇದೆ. ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಚಳಿ, ಶೀತಗಾಳಿಯ ವಾರ್ನಿಂಗ್ಗೂ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಮುಂದಿನ ಮೂರ್ನಾಲ್ಕು ದಿನ ಇದೇ ವಾತವಾರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಕರೆಂಟ್ ಬಿಟ್ಟಿಲ್ಲ ಎಂದು ಶಾಪ ಹಾಕೋ ಜನಗಳೇ ಇಲ್ನೋಡಿ.. ನಿಮ್ಮ ಮನೆ ಬೆಳಗಲು ಜೀವವನ್ನೇ ಒತ್ತೆಯಿಟ್ಟು ಕೆಲಸ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ