/newsfirstlive-kannada/media/post_attachments/wp-content/uploads/2024/04/heat-wave5.jpg)
ಬೆಂಗಳೂರು: ಭಯಾನಕ ಬಿಸಿಲಿನ ಬೇಗೆಗೆ ರಾಜ್ಯದ ಜನ ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಬೇಸಿಗೆಯಂತೂ ಮನೆಯಿಂದ ಆಚೆ ಬಂದವರನ್ನ ಬಿಟ್ಟು ಬಿಡದೇ ಕಾಡುತ್ತಾ ಇದೆ. ಸಾಕಪ್ಪಾ ಸೂರ್ಯನ ಶಾಖ ಅಂತಿರೋ ಜನರು ಮಳೆರಾಯನ ಆಗಮನಕ್ಕೆ ಎದುರು ನೋಡುತ್ತಿದ್ದಾರೆ. ಬಿಸಿಲಿನ ತಾಪ ಯಾವಾಗ ಕಡಿಮೆ ಆಗುತ್ತೆ. ಉದ್ಯಾನನಗರಿ ಬೆಂಗಳೂರು ಯಾವಾಗ ಹಾಟ್ ವೆದರ್‌ನಿಂದ ಕೂಲ್ ಆಗೋದು ಯಾವಾಗ ಅನ್ನೋ ಮಾಹಿತಿ ಇಲ್ಲಿದೆ ನೋಡಿ.
ಭಾರತೀಯ ಹವಮಾನ ಇಲಾಖೆ (IMD) ವೆದರ್ ರಿಪೋರ್ಟ್ ಬಿಡುಗಡೆ ಮಾಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿಸಿಗಾಳಿ, ಬೇಸಿಗೆಯ ತಾಪಮಾನ ಮುಂದಿನ 48 ಗಂಟೆಗಳ ಕಾಲ ಮುಂದುವರಿಯಲಿದೆ ಎನ್ನಲಾಗಿದೆ. ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಇನ್ನು ಕೆಲವು ದಿನ ಇದೇ ಬಿಸಿಗಾಳಿಯ ವಾತಾವರಣ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ:‘ಬಾರೋ ಬಾರೋ ಮಳೆರಾಯ..’ 48 ಗಂಟೆಯಲ್ಲಿ ತಂಪೆರೆಯಲಿದೆ ಮಳೆ..! ಎಲ್ಲೆಲ್ಲಿ..?
ಏಪ್ರಿಲ್ 30 ರಿಂದ ಮೇ 5ರವರೆಗೂ ಕರ್ನಾಟಕದ ಹಲವು ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಶಾಖ ನಗರಿ ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ 43 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಮೇ 3 ರವರೆಗೂ ಬಿಸಿಲಿನ ಶಾಖ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರದಲ್ಲಿ ಮುಂದುವರಿಯಲಿದೆ.
ಎಲ್ಲೆಲ್ಲಿ ಆರೆಂಜ್ ಅಲರ್ಟ್!
ಏಪ್ರಿಲ್ 29 ರಿಂದ ಮೇ 3 ರವರೆಗೆ ಬಿಸಿಗಾಳಿಯಿಂದ ತೀವ್ರ ಬಿಸಿಗಾಳಿ ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಾಗಿರುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಶುಷ್ಕ ವಾತಾವರಣವು ಹೆಚ್ಚಾಗಿರುವ ಸಾಧ್ಯತೆಯಿದೆ. ಹೀಗಾಗಿ ವಿಜಯನಗರ, ತುಮಕೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಹಾವೇರಿ, ಗದಗ, ಬೀದರ್, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
/newsfirstlive-kannada/media/post_attachments/wp-content/uploads/2024/04/RAIN-RAIN.jpg)
ಮೇ 6ಕ್ಕೆ ಮಳೆರಾಯನ ಸಿಂಚನ!
ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೆ ಉಷ್ಣಾಂಶ ದಾಖಲೆ ಬರೆದಿದೆ. ಕಳೆದ ಭಾನುವಾರವಷ್ಟೇ 38.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಇದ್ದು ಕಳೆದ 50 ವರ್ಷಗಳಲ್ಲೇ 2ನೇ ಬಿಸಿಲು ದಾಖಲಾಗಿದೆ. ಮೇ 3ರ ಬಳಿಕ ಕರ್ನಾಟಕದಲ್ಲಿ ಸೂರ್ಯನ ಶಾಖ ತುಸು ಕಡಿಮೆ ಆಗುವ ಸಾಧ್ಯತೆ ಇದೆ. ಮೇ 6ರಂದು ಮಂಡ್ಯ, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us