newsfirstkannada.com

‘ಗೃಹಲಕ್ಷ್ಮೀ’ಗೆ ಅರ್ಜಿ ಸಲ್ಲಿಸೋದು ಹೇಗೆ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು? ಇಲ್ಲಿದೆ ಮಾಹಿತಿ

Share :

16-07-2023

  ಕರುನಾಡ ಮಹಿಳೆಯರಿಗೆ ಸರ್ಕಾರದಿಂದ ಗುಡ್​ನ್ಯೂಸ್​

  ಜುಲೈ 19ರಂದು ಸಂಜೆ 5 ಗಂಟೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ

  ಯೋಜನೆಯ ಫಲಾನುಭವಿಗಳಿಗೆ ಆಧಾರ್ ಲಿಂಕ್ ಕಡ್ಡಾಯ

ಮಹಿಳಾ ಮಣಿಗಳಿಗೆ ಶಕ್ತಿಯ ಮೂಲಕ ಭರ್ಜರಿ ಗಿಫ್ಟ್​ ಕೊಟ್ಟಿದ್ದ ಸರ್ಕಾರ ಈಗ ಮತ್ತೊಂದು ದೊಡ್ಡ ಗಿಫ್ಟ್​ ನೀಡೋಕೆ ಮುಂದಾಗಿದೆ. ಎಲ್ಲೆಂದರಲ್ಲಿ ಫ್ರೀ ಬರ್ಡ್​ನಂತೆ ಓಡಾಡಲು ಫ್ರೀ ಬಸ್​ ಕೊಟ್ಟಿರೋ ಕಾಂಗ್ರೆಸ್ ಸರ್ಕಾರ, ಇದೀಗ ರಾಜ್ಯದ ಎಲ್ಲಾ ಗೃಹಗಳ ಲಕ್ಷ್ಮೀಯರ ಖಾತೆಗೆ 2 ಸಾವಿರ ಹಣ ಹಾಕುವ ಬಗ್ಗೆ ಶುಭ ಸುದ್ದಿಯೊಂದನ್ನ ಕೊಟ್ಟಿದೆ.

ಜುಲೈ 19ರಿಂದ ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಕೆಗೆ ಅವಕಾಶ

ಗೃಹಲಕ್ಷ್ಮೀ ಯೋಜನೆ ಜಾರಿ ಯಾವಾಗ? ಯಾವಾಗಿನಿಂದ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು ಹೀಗೆ ನಾನಾ ಗೊಂದಲಗಳು ಶುರುವಾಗಿವೆ. ಈ ಎಲ್ಲಾ ಗೊಂದಲಗಳಿಗೆ ಮದ್ದರೆಯುವ ನಿಟ್ಟಿನಲ್ಲಿ ಸರ್ಕಾರ ಇವತ್ತು ಪ್ರಯತ್ನಿಸಿದೆ. ಆದಷ್ಟು ಶೀಘ್ರವೇ ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಕ್ಲಾರಿಟಿ ಸಿಗುತ್ತೆ ಎಂಬ ಗ್ಯಾರಂಟಿ ಸಿಕ್ಕಿದೆ. ಮನೆ ಯಜಮಾನಿಗೆ 2 ಸಾವಿರ ರೂಪಾಯಿ ನೀಡುವ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಸರ್ಕಾರ ಕೆಲವೇ ದಿನಗಳಲ್ಲಿ ಚಾಲನೆ ನೀಡಲಿದೆ.

ವಿಧಾನಸೌಧದಲ್ಲಿರುವ ಬ್ಯಾಕ್ವೆಂಟ್ ಹಾಲ್‌ನಲ್ಲಿ ಕಾರ್ಯಕ್ರಮ

ಜುಲೈ 19ರಂದು ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅಂದು ಸಂಜೆ 5 ಗಂಟೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಚಾಲನೆ ನೀಡಲು ವಿಧಾನಸೌಧದಲ್ಲಿರುವ ಬ್ಯಾಕ್ವೆಂಟ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಜು.20ರಂದು ರಾಜ್ಯದ ಗೃಹಲಕ್ಷ್ಮೀಯರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಇನ್ನು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅಪ್ಲಿಕೇಷನ್ ಎಲ್ಲಿ ಸಲ್ಲಿಸಬೇಕು ಅಂತ ಮಹಿಳಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಲಿಂಕ್ ಆದ ಮೊಬೈಲ್​ಗೆ ಅರ್ಜಿ ಸಲ್ಲಿಕೆಗೆ ಸಮಯ ನಿಗದಿ

ಯೋಜನೆಯ ಫಲಾನುಭವಿಗಳಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು, ಆಧಾರ್ ಲಿಂಕ್ ಆದ ಫೋನ್​ ತೆಗೆದುಕೊಂಡು ಹೋಗಿ ಅರ್ಜಿ‌ ಸಲ್ಲಿಕೆ ಸಲ್ಲಿಕೆ ಮಾಡಬೇಕು. ಲಿಂಕ್ ಆದ ಮೊಬೈಲ್​ಗೆ ಅರ್ಜಿ ಸಲ್ಲಿಕೆಯ ದಿನಾಂಕ, ಸಮಯದ ಸಂದೇಶ ರವಾನೆ ಆಗಲಿದೆ. ಅದೇ ಸಮಯಕ್ಕೆ ಹೋಗಿ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಒಂದ್ವೇಳೆ ಇದು ಸಾಧ್ಯವಾಗದಿದ್ದಲ್ಲೆ ನಿತ್ಯವೂ ಸಂಜೆ 5 ಗಂಟೆ ಬಳಿಕ ನಿಗದಿ ಕೇಂದ್ರಗಳಿಗೆ ಹೋಗಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನೂ ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆಗೆ ನಿಮ್ಮ ಮನೆ ಬಾಗಿಲಿಗೆ ಪ್ರಜಾಪ್ರತಿನಿಧಿಗಳು ಬರಲಿದ್ದಾರೆ. ಅಲ್ಲದೇ ಈ ಯೋಜನೆಗೆ ಅಪ್ಲಿಕೇಷನ್ ಹಾಕಲು ಯಾವುದೇ ಟೈಮ್ ಲಿಮಿಟ್ ಇಲ್ಲ. ಒಟ್ಟಾರೆ, ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಸ್ಕೀಂ ಬಗ್ಗೆ ಗುಡ್‌ನ್ಯೂಸ್ ಸಿಕ್ಕಂತಾಗಿದೆ. ಜುಲೈನಲ್ಲಿ ಅರ್ಜಿ ಹಾಕಿದ್ರೆ ಆಗಸ್ಟ್‌ನಲ್ಲಿ ಗೃಹಲಕ್ಷ್ಮೀ ಮನೆ ತಲುಪುವುದು ಗ್ಯಾರಂಟಿ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಗೃಹಲಕ್ಷ್ಮೀ’ಗೆ ಅರ್ಜಿ ಸಲ್ಲಿಸೋದು ಹೇಗೆ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು? ಇಲ್ಲಿದೆ ಮಾಹಿತಿ

https://newsfirstlive.com/wp-content/uploads/2023/07/Laxmi-hebbalkar.jpg

Load More