/newsfirstlive-kannada/media/post_attachments/wp-content/uploads/2025/05/WhatsApp-Image-2023-06-14-at-4.38.16-PM.jpeg)
ಬೆಂಗಳೂರು: ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ 2025)ರ ಫಲಿತಾಂಶ ಇಂದು ಪ್ರಕಟವಾಗಲಿದೆ. ಏಪ್ರಿಲ್ 15, 16 ಮತ್ತು 17ರಂದು ರಾಜ್ಯದಲ್ಲಿ ನಡೆದ CET ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಗ್ಗೆ 11.30ಕ್ಕೆ ಪ್ರಕಟ ಮಾಡಲಾಗುವುದು.
ಇದನ್ನೂ ಓದಿ:ನಟ ಮಡೆನೂರು ಮನುಗೆ ಬಿಗ್ ಶಾಕ್.. ಪೊಲೀಸ್ ವಿಚಾರಣೆಯಲ್ಲಿ ಸಂತ್ರಸ್ತೆ ಸಾಕ್ಷ್ಯ ದಾಖಲು; ಹೇಳಿದ್ದೇನು?
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರು ಕೆಇಎ ಕಚೇರಿಯಲ್ಲಿ ಇಂದು ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟ ಮಾಡಲಾಗಿದ್ದಾರೆ. ಬೆಳಗ್ಗೆ 11.30ಕ್ಕೆ ಸಚಿವ ಎಂ.ಸಿ ಸುಧಾಕರ್ ಅವರು ಸಿಇಟಿ ಫಲಿತಾಂಶ ಪ್ರಕಟ ಮಾಡಿದ್ರೆ, ಇಂದು ಮಧ್ಯಾಹ್ನ 2 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ CET ಫಲಿತಾಂಶ ಪ್ರಕಟವಾಗಲಿದೆ.
ಸಿಇಟಿ-2025ರ ಫಲಿತಾಂಶವನ್ನು ಆನ್‌ಲೈನ್ ಮೂಲಕ ಪ್ರಕಟಿಸಲಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ