/newsfirstlive-kannada/media/post_attachments/wp-content/uploads/2024/12/HBL-AYYAPPA.jpg)
ಹುಬ್ಬಳ್ಳಿ: ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಉಸಿರು ನಿಲ್ಲಿಸಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (18) ನಿಧನರಾಗಿದ್ದಾರೆ.
ಕಳೆದ ಸೋಮವಾರ ಸಾಯಿ ನಗರದ ಉಚ್ಚಮ್ಮಳ ಕಾಲೋನಿಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತ್ತು. ಅಯ್ಯಪ್ಪನ ಸನ್ನಿಧಿಯಲ್ಲಿ ಮಲಗಿದ್ದ 9 ಮಾಲಾಧಾರಿಗಳು ಸುಟ್ಟ ಗಾಯಗಳಿಂದ ಗಂಭೀರಗೊಂಡಿದ್ದರು. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ 7 ಭಕ್ತರಿಗೆ ಚಿಕಿತ್ಸೆ ಮುಂದುವರಿದಿದೆ. ಸಚಿವ ಸಂತೋಷ್ ಲಾಡ್ ಮನವಿ ಹಿನ್ನೆಲೆ ಬೆಂಗಳೂರಿನಿಂದ ವೈದ್ಯರ ತಂಡ ಆಗಮಿಸಿದೆ. ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಮೃತರ ಕುಟುಂಬಸ್ಥರು ಮತ್ತು ಅಯ್ಯಪ್ಪ ಮಾಲಾಧಿಗಾರಿಗಳು ಕಣ್ಣೀರು ಇಡುತ್ತಿದ್ದಾರೆ.
ಮನೆ ಮಕ್ಕಳನ್ನು ಕಳೆದುಕೊಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಮೃತ ಅಯ್ಯಪ್ಪ ಮಾಲಾಧಾರಿ ಸಂಜಯ್ ಸವದತ್ತಿ ದೇಶ ಸೇವೆ ಕನಸು ಕಟ್ಟಿಕೊಂಡಿದ್ದ. ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಬಿಎ ಓದುತ್ತಿದ್ದ. ಇದೇ ಮೊದಲ ಬಾರಿಗೆ ಅಯ್ಯಪ್ಪನ ಸೇವೆ ಮಾಡಲು ಮಾಲೆ ಹಾಕಿಕೊಂಡಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇದನ್ನೂ ಓದಿ:Bigg Boss: ಉಗ್ರಂ ಮಂಜು ತಲೆಗೆ ಬಾಟಲಿಯಿಂದ ಹೊಡೆದ ಮೋಕ್ಷಿತಾ ಪೈ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us