/newsfirstlive-kannada/media/post_attachments/wp-content/uploads/2024/12/HBL-CYLENDER-BLAST.jpg)
ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ಪ್ರಕರಣದಲ್ಲಿ ಮತ್ತೊರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾನೆ. ಪ್ರಕರಣದಲ್ಲಿ ಸಾವಿನ ಸಂಖ್ಯೆ ಈಗ ನಾಲ್ಕಕ್ಕೆ ಏರಿಕೆಯಾಗಿದೆ. ಲಿಂಗರಾಜು ಬೀರನೂರ ಎಂಬ 19 ವರ್ಷದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಭಾನುವಾರ ರಾತ್ರಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್​ ಪ್ರಕರಣದಲ್ಲಿ ಈಗ ಮತ್ತೊಬ್ಬ ದುರ್ದೈವಿ ಪ್ರಾಣ ಕಳೆದುಕೊಂಡಿದ್ದಾನೆ. ಹುಬ್ಬಳ್ಳಿಯ ಸಾಯಿನಗರದಲ್ಲಿ ಈ ದುರ್ಘಟನೆ ನಡೆದಿತ್ತು. ಅಯ್ಯಪ್ಪ ಸನ್ನಿಧಿಯಲ್ಲಿ ಗ್ಯಾಸ್​ ಸೋರಿಕೆಯಾಗಿ ಸಿಲಿಂಡರ್ ಬ್ಲಾಸ್ಟ್ ಆಗಿತ್ತು.
ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ದಾರುಣ ಘಟನೆ.. ಉಸಿರು ನಿಲ್ಲಿಸಿದ ಅಯ್ಯಪ್ಪನ ಇಬ್ಬರು ಮಾಲಾಧಾರಿಗಳು
ಅಯ್ಯಪ್ಪ ಸನ್ನಿಧಿಯಲ್ಲಿ ಹೊತ್ತಿಕೊಂಡಿದ್ದ ಬೆಂಕಿಯಿಂದ 9 ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡವರನ್ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದ್ದು, ಉಳಿದ ಗಾಯಾಳುಗಳಿಗೆ ಇನ್ನೂ ಚಿಕಿತ್ಸೆ ನಡೆಯುತ್ತಿದೆ.
/newsfirstlive-kannada/media/post_attachments/wp-content/uploads/2024/12/HBL-CYLENDER-BLAST-1.jpg)
ಗಾಯಗೊಂಡವರಲ್ಲಿ ನಿನ್ನೆಯಷ್ಟೇ ಇಬ್ಬರು ಸಾವನ್ನಪ್ಪಿದ್ದರು. ನಿಜಲಿಂಗಪ್ಪ, ಸಂಜಯ್ ಸವದತ್ತಿ ಎಂಬುವವರು ನಿನ್ನೆಯಷ್ಟೇ ಉಸಿರು ನಿಲ್ಲಿಸಿದ್ದರು. ಸದ್ಯ ಐವರು ಗಾಯಾಳುಗಳಿಗೆ ಕಿಮ್ಸ್​ನಲ್ಲಿ ಚಿಕಿತ್ಸೆ ಮುಂದುವರಿದಿದೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us