ಕಾರ್ಪೊರೇಟರ್ ಪುತ್ರಿಯ ಭೀಕರ ಹತ್ಯೆ; ರಾಜಕಾಲುವೆಯ ಕೆಳಗೆ ಅಡಗಿ ಕುಳಿತಿದ್ದ ಆರೋಪಿ ಫಯಾಜ್

author-image
Ganesh
Updated On
ನೇಹಾ ಹಿರೇಮಠ ಪ್ರಕರಣ; ಆರೋಪಿ ಫಯಾಜ್​ ವಿಚಾರದಲ್ಲಿ CID ಇಂದು ಮಹತ್ವದ ನಿರ್ಧಾರ
Advertisment
  • ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಬೆಚ್ಚಿ ಬೀಳಿಸುವ ಕೃತ್ಯ
  • ಪ್ರೀತಿಯ ವಿಚಾರಕ್ಕೆ ಬೆಳಗಾವಿ ಮೂಲದ ಫಯಾಜ್​​ನಿಂದ ಕೃತ್ಯ
  • ಆರೋಪಿಯ ಗಲ್ಲಿಗೇರಿಸಲು ಆಗ್ರಹಿಸಿದ ಎಬಿವಿಪಿ ಕಾರ್ಯಕರ್ತರು

ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್​​ನೊಳಗೆ ವಿದ್ಯಾರ್ಥಿನಿಯೋರ್ವಳ ಬರ್ಬರ ಹತ್ಯೆ ನಡೆದಿದೆ. ಪ್ರೀತಿಯ ವಿಚಾರಕ್ಕೆ ಹತ್ಯೆ ನಡೆದಿದೆ ಎನ್ನಲಾಗ್ತಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗಲ್ಲಿಗೇರಿಸುವಂತೆ ಎಬಿವಿಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಜೈಲಿನಲ್ಲೇ ಕೇಜ್ರಿವಾಲ್ ಹತ್ಯೆಗೆ ಸಂಚು’ -ಸಂಚಲ ಮೂಡಿಸಿದ ಗಂಭೀರ ಆರೋಪ

ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಬೆಚ್ಚಿಬೀಳಿಸುವ ಕೃತ್ಯ
ಹಾಡಹಗಲೇ ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಯುವತಿಯೊಬ್ಬಳ ಬರ್ಬರ ಹತ್ಯೆ ನಡೆದಿದ್ದು ಕ್ಯಾಂಪಸ್​​ನ್ನು ಬೆಚ್ಚಿಬೀಳಿಸಿದೆ. ಹುಬ್ಬಳ್ಳಿ ಮಹಾನಗರ ಪಾಲಿಕೆ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಹಿರೇಮಠ್ ಹತ್ಯೆಯಾದ ದುರ್ದೈವಿ. ಪ್ರೀತಿಯ ವಿಚಾರಕ್ಕೆ ಬೆಳಗಾವಿ ಮೂಲದ ಫಯಾಜ್ ಎಂಬಾತ 11 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದಾನೆ. ಆಕೆ ಸ್ಥಳದಲ್ಲೇ ಅಸುನೀಗಿದ್ದಾಳೆ. ಕೃತ್ಯ ಎಸಗಿ ರಾಜಕಾಲುವೆಯ ಕೆಳಗೆ ಅಡಗಿ ಕುಳಿತಿದ್ದ ಫಯಾಜ್​​ನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ.

ಕೃತ್ಯ ಖಂಡಿಸಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ
ಹಾಡಹಗಲೇ ನಡೆದಿರುವ ಘಟನೆ ಹುಬ್ಬಳ್ಳಿ ಜನರನ್ನು ಬೆಚ್ಚಿಬೀಳಿಸಿದೆ. ಘಟನೆಯಿಂದ ರೊಚ್ಚಿಗೆದ್ದ ಎಬಿವಿಪಿ ಕಾರ್ಯಕರ್ತರು ಹುಬ್ಬಳ್ಳಿ-ಧಾರವಾಡ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ, ಟೈರ್​​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿ ಫಯಾಜ್​​ನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ.

ಈ ರೀತಿಯ ಕೃತ್ಯಗಳಿಗೆ ರಾಜ್ಯ ಸರ್ಕಾರ ನೇರ ಹೊಣೆಯಾಗುತ್ತದೆ. ಅಂತವರಿಗೆ ಬೆಂಬಲ ನೀಡುವಂತಹ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಲವ್ ಜಿಹಾದ್​ನಂತಹ ಪ್ರಕರಣಗಳು ಆಗದ ರೀತಿಯಲ್ಲಿ ಕಾನೂನನ್ನು ತರುವ ಪ್ರಯತ್ನ ಮಾಡಬೇಕು. ಈ ಕ್ಯಾಂಪಸ್​​​ಗೆ ಸರಿಯಾದ ಭದ್ರತೆ ನೀಡಬೇಕು ಎಂದು ಎಬಿವಿಪಿ ಕಾರ್ಯಕರ್ತ ಮಣಿಕಂಠ ಕಳಸ ಆಗ್ರಹಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment