ಬಿಜೆಪಿ, ಹಿಂದೂ ಸಂಘಟನೆಯಿಂದ ಅಹೋರಾತ್ರಿ ಪ್ರತಿಭಟನೆ
ಶಾಸಕ ಅರವಿಂದ ಬೆಲ್ಲದ್ ಕೂಡಾ ಈದ್ಗಾ ವಿಚಾರಕ್ಕೆ ಬೆಂಬಲ
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ
ಈದ್ಗಾ ಮೈದಾನ.. ಹುಬ್ಬಳ್ಳಿಯ ಐತಿಹಾಸಿಕ ಮೈದಾನ. ಇದೀಗ ಈ ಗ್ರೌಂಡ್‌ನಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ತೀವ್ರ ಸ್ವರೂಪ ಪಡೆದಿದೆ. ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳ ಬಾಕಿ ಇರುವಾಗಲೇ ಗಣೇಶ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಹಿಂದೂಪರ ಸಂಘಟನೆ ಕಾರ್ಯಕರ್ತರು ಗಣೇಶ ಪ್ರತಿಷ್ಠಾಪನೆಗೆ ಪಟ್ಟು ಹಿಡಿದಿದ್ದಾರೆ. ಇದಕ್ಕೆ ಕೇಸರಿ ನಾಯಕರು ಕೈ ಜೋಡಿಸಿ, ಪಾಲಿಕೆಯ ಮುಂದೆ ಭಜನೆ ಮಾಡುತ್ತಾ ಅಹೋರಾತ್ರಿ ಧರಣಿ ಹೋರಾಟ ಮಾಡಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಬಿಗಿಪಟ್ಟು
ಹುಬ್ಬಳ್ಳಿಯ ಈದ್ಗಾ ಮೈದಾನ ಒಂದಲ್ಲ ಒಂದು ವಿವಾದಕ್ಕೆ ಗುರಿಯಾಗುತ್ತಲೇ ಇದೆ. ಇದೀಗ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಕು ಅನ್ನೋ ಕೂಗು ತೀವ್ರ ಸ್ವರೂಪ ಪಡೆದುಕೊಂಡಿದೆ. ಗಣೇಶ ಚತುರ್ಥಿಗೆ ಅದರಲ್ಲೂ ಹುಬ್ಬಳ್ಳಿಯ ಐತಿಹಾಸಿಕ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡೇ ತೀರುತ್ತೇವೆ ಅಂತ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಇದ್ರ ಮಧ್ಯೆ ಬಿಜೆಪಿ ನಾಯಕರು ಈದ್ಗಾ ಮೈದಾನದಲ್ಲಿ ಗಣಪತಿ ಕೂರಿಸಲು ಅಹೋರಾತ್ರಿ ಧರಣಿ ನಡೆಸಿದ್ದಾರೆ.
ಶಾಸಕ ಅರವಿಂದ ಬೆಲ್ಲದ್ ಕೂಡಾ ಈದ್ಗಾ ವಿಚಾರಕ್ಕೆ ಬೆಂಬಲ ಕೊಟ್ಟಿದ್ದಾರೆ. ಈ ಕುರಿತಂತೆ ಸೂಕ್ತ ನಿರ್ಧಾರ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಬಿಜೆಪಿ ಪಾಲಿಕೆ ಸದಸ್ಯರ ನಿಯೋಗ ಹು-ಧಾ ಮಹಾನಗರ ಪಾಲಿಕೆಗೆ ಧಾವಿಸಿದ್ರು. ಈ ವೇಳೆ ಕೆಲಕಾಲ ಪಾಲಿಕೆ ಆಯುಕ್ತರ ಜೊತೆ ಚರ್ಚೆ ಮಾಡಿದ್ರು. ಅಲ್ದೇ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡಿದ್ದು, ಕೂಡಲೇ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು ಎಂದು ಆಯುಕ್ತರ ವಿರುದ್ಧ ಬೆಲ್ಲದ್ ಗರಂ ಕೆಲಕಾಲ ವಾಗ್ವಾದ ನಡೆಸಿದ ಪ್ರಸಂಗವೂ ನಡೀತು.
ಹು-ಧಾ ಮಹಾನಗರ ಪಾಲಿಕೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು ಅಂತ ಬಿಜೆಪಿ ನಾಯಕರು, ಹಿಂದೂ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸಿದ್ರು. ಈ ಧರಣಿಯಲ್ಲಿ ಅರವಿಂದ ಬೆಲ್ಲದ್ ಭಾಗಿಯಾಗಿ ಭಜನೆ ಹಾಡಿಗೆ ತಾಳ ಹಾಕಿದರು. ಹಿಂದೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಪಾಲಿಕೆ ಮುಂಭಾಗದಲ್ಲಿ ಗಜಾನನ ಹಾಡು ಹಾಡಿ, ಭಜನೆ ಮಾಡಿ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ರು. ಅಲ್ಲದೇ ಸರ್ಕಾರ ಗಣೇಶ ಪ್ರತಿಷ್ಟಾಪನೆಗೆ ಅನುಮತಿ ನೀಡದಿದ್ರೂ ನಾವು ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ ಎಂದು ಶಾಸಕ ಅರವಿಂದ್ ಬೆಲ್ಲದ್ ಎಚ್ಚರಿಕೆ ನೀಡಿದ್ದಾರೆ.
ಹಿಂದೂ ಸಂಘಟನೆಗಳ ಈ ಆಗ್ರಹಕ್ಕೆ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಡಬಾರದು. ಒಂದ್ವೇಳೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಮಾಡಿಕೊಟ್ಟರೆ ಕಾನೂನು ಹೋರಾಟದ ಮೂಲಕ ಬಿಸಿ ಮುಟ್ಟಿಸುವ ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಗಣೇಶ ಪ್ರತಿಷ್ಠಾಪನೆ ವಿಚಾರ ಇದೀಗ ಹು-ಧಾ ಮಹಾನಗರ ಪಾಲಿಕೆ ಹಾಗೂ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಒಟ್ಟಿನಲ್ಲಿ ಈವರೆಗೂ ಶಾಂತವಾಗಿದ್ದ ವಾಣಿಜ್ಯ ನಗರಿಯಲ್ಲಿ ಗಣೇಶ ಪ್ರತಿಷ್ಠಾಪನೆಯ ಕಿಚ್ಚು ಹೊತ್ತಿದೆ. ಈ ವಿವಾದ ಇನ್ನೂ ಯಾವ ಹಂತಕ್ಕೆ ತಲುಪಲಿದೆ. ಗಣೇಶ ಪ್ರತಿಷ್ಟಾಪನೆಗೆ ಅವಕಾಶ ಸಿಗುತ್ತಾ? ಇಲ್ವಾ? ಕಾದುನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ