/newsfirstlive-kannada/media/post_attachments/wp-content/uploads/2023/11/Kantara.jpg)
ಕಾಂತಾರ.. ಕರಾವಳಿ ದೈವಾರಾಧನೆಯನ್ನ ಇಡೀ ವಿಶ್ವಕ್ಕೆ ಸಾರಿದ್ದ ಸಿನಿಮಾ. ಇದೀಗ ಈ ಚಿತ್ರದ ಪ್ರೀಕ್ವೆಲ್ ಕಾಂತಾರ 2 ಚಿತ್ರೀಕರಣ ಭರದಿಂದ ಸಾಗುತ್ತಿದೆ. ರಿಷಬ್ ಶೆಟ್ಟಿ ಮತ್ತೊಂದು ಹಿಟ್ ಕೊಡೋಕೆ ಭರ್ಜರಿ ಸಿದ್ಧತೆ ಮಾಡಿಕೊಳ್ತಿದ್ದಾರೆ. ಇದ್ರ ಮಧ್ಯೆ ಕಾಂತಾರ-2 ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಹಾನಿ ಮಾಡಿದ ಆರೋಪ ಕೇಳಿಬಂದಿದೆ. ಇದಕ್ಕೆ ಚಿತ್ರತಂಡ ಭಾರೀ ದಂಡವನ್ನೂ ತೆತ್ತಿದೆ.
‘ಕಾಂತಾರ 2’ ಚಿತ್ರದ ಶೂಟ್ ವೇಳೆ ಅರಣ್ಯಕ್ಕೆ ಹಾನಿ
‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ರಿಷಬ್ ಶೆಟ್ಟಿ ಅವರು ‘ಕಾಂತಾರ ಪ್ರೀಕ್ವೆಲ್ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸುತ್ತಮುತ್ತ ಸಾಗುತ್ತಿದೆ. ಇದರಲ್ಲಿಯೂ ಮಣ್ಣಿನ ಕಥೆ ಹೇಳಲು ರಿಷಬ್ ಶೆಟ್ಟಿ ರೆಡಿ ಆಗಿದ್ದಾರೆ. ಹೀಗಿರುವಾಗಲೇ ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪ ತಂಡದ ಮೇಲೆ ಬಂದಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಚಿತ್ರದ ಶೂಟಿಂಗ್ ನಡೆಸಲಾಗುತ್ತಿದೆ. ಜನವರಿ 2ರಿಂದ ಪ್ರೀಕ್ವೆಲ್‌ನ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರತಂಡ, ಶೂಟಿಂಗ್ಗಾಗಿ ಗೋಮಾಳ ಜಾಗಕ್ಕೆ ಪರವಾನಗಿ ಪಡೆದಿದೆ. ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದು, ಚಿತ್ರತಂಡದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕಾಂತಾರ ರಿಷಬ್ ಶೆಟ್ಟಿ ‘ಛತ್ರಪತಿ ಶಿವಾಜಿ’ ಅವತಾರಕ್ಕೆ ವ್ಯಾಪಕ ವಿರೋಧ; ಅಸಲಿ ಕಾರಣವೇನು?
ಗ್ರಾಮಸ್ಥರ ಆರೋಪ ಕೇಳಿಬರ್ತಿದ್ದಂತೆ ಅರಣ್ಯ ಇಲಾಖೆ ಉಪಸಂರಕ್ಷಣಾಧಿಕಾರಿಗಳು ಚಿತ್ರತಂಡದ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ರಿಷಬ್ ಶೆಟ್ಟಿ ಕಾಂತಾರ ಚಿತ್ರತಂಡ ಮಾಡಿರೋ ಯಡವಟ್ಟಿಗೆ ಅರಣ್ಯ ಇಲಾಖೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಇನ್ನೂ ಅರಣ್ಯ ಪ್ರದೇಶದಲ್ಲಿ ಬ್ಲಾಸ್ಟ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಸ್ಥಳ ಪರಿಶೀಲನೆ ನಡೆಸಿರೊ ಅರಣ್ಯ ಅಧಿಕಾರಿಗಳಿಗೆ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ ಎಂಬ ಮಾಹಿತಿ ನೀಡಿದ್ದಾರೆ. ಅನುಮತಿ ಪಡೆಯದೇ ಇರೋದಕ್ಕೆ ದಂಡ ವಿಧಿಸಿದ್ದಾರೆ.
ಕರಾವಳಿ ಮಣ್ಣಿನ ಕಥೆ ಹೇಳಲು ರಿಷಬ್ ಶೆಟ್ಟಿ ರೆಡಿ ಆಗಿದ್ದಾರೆ. ಚಿತ್ರದ ಶೂಟಿಂಗ್ ಹಾಗೂ ಅದರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕುಂದಾಪುರದಲ್ಲೇ ನಡೆಯುತ್ತಿವೆ. ನಮ್ಮ ಸಂಸ್ಕೃತಿ, ಆಚರಣೆಗಳನ್ನ ಜನರಿಗೆ ತೋರಿಸೋದು ಓಕೆ.. ಹಾಗಂತ ವಣ್ಯ ಜೀವಿಗಳ ಉಸಿರು ಅರಣ್ಯ ಸಂಪತ್ತಿಗೆ ಹಾನಿ ಮಾಡೋದ್ದೇ ಆದ್ರೆ ನಿಜಕ್ಕೂ ತಪ್ಪು.
ಇದನ್ನೂ ಓದಿ: ಕಾಂತಾರ-2 ತಂಡದ ವಿರುದ್ಧ ರೊಚ್ಚಿಗೆದ್ದ ಹಾಸನ ಮಂದಿ.. ರಿಷಬ್ ಶೆಟ್ಟಿ ವಿರುದ್ಧ ಗಂಭೀರ ಆರೋಪ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ