newsfirstkannada.com

ಮಂಡ್ಯದಲ್ಲಿ ಗಂಡ, ಹೆಂಡತಿ ದುರಂತ ಅಂತ್ಯ.. ಒಂದು ವರ್ಷದ ಹೆಣ್ಣು ಮಗು ಅನಾಥ; ಅಸಲಿಗೆ ಆಗಿದ್ದೇನು?

Share :

Published August 21, 2024 at 1:57pm

Update August 21, 2024 at 1:59pm

    ತನ್ನ ಮಗುವನ್ನ ಅತ್ತೆ ಮನೆಯಲ್ಲಿಯೇ ಬಿಟ್ಟು ಬಂದಿದ್ದ ಪತಿ ಮೋಹನ್

    ಸಣ್ಣ ಪುಟ್ಟ ವಿಚಾರಕ್ಕೆ ಆಗಾಗ ಪತಿ ಪತ್ನಿ ನಡುವೆ ನಡೆಯುತ್ತಿತ್ತು ಗಲಾಟೆ

    ಭಾವನ ಮನೆಗೆ ಮಗುವನ್ನು ಕರೆದುಕೊಂಡು ಬಂದಿದ್ದ ಸಹೋದರನಿಗೆ ಶಾಕ್!

ಮಂಡ್ಯದ ಕೆ.ಆರ್‌.ಪೇಟೆ ತಾ. ಗದ್ದೆಹೊಸೂರಿನಲ್ಲಿ ದಂಪತಿ ದುರಂತ ಅಂತ್ಯವಾಗಿದೆ. ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸ್ವಾತಿ (21) ಗೃಹಿಣಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಪತ್ನಿ ನೇಣಿಗೆ ಶರಣಾದ ಬೆನ್ನಲ್ಲೇ ಪತಿಯೂ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಂಪತಿಯ ಒಂದು ವರ್ಷದ ಹೆಣ್ಣು ಮಗು ಈಗ ತಂದೆ, ತಾಯಿ ಇಲ್ಲದೇ ಅನಾಥವಾಗಿದೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ; ಅತ್ತ ಗಂಡನೂ ಆತ್ಮ*ಹತ್ಯೆ; ಕೋಪಗೊಂಡು ಅಳಿಯನ ಮನೆಗೆ ಬೆಂಕಿ ಇಟ್ಟ ಕುಟುಂಬಸ್ಥರು

ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತಪಟ್ಟ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಸಂಬಂಧ ಕಿಕ್ಕೇರಿ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಅಸಲಿಗೆ ಆಗಿದ್ದೇನು?

ಎರಡು ವರ್ಷದ ಹಿಂದೆ ಸ್ವಾತಿ ಹಾಗೂ ಮೋಹನ್ ಮದುವೆಯಾಗಿದ್ದರು. ಮೃತ ದಂಪತಿಗೆ ಒಂದು ವರ್ಷದ ಹೆಣ್ಣು ಮಗು ಕೂಡ ಇದೆ. ತಂದೆ, ತಾಯಿ ಪತ್ನಿ ಜೊತೆ ತೋಟದ ಮನೆಯಲ್ಲಿಯೇ ವಾಸವಿದ್ದ ಮೋಹನ್. ಈ ಇಬ್ಬರ ಮಧ್ಯೆ ಆಗಾಗ ಸಣ್ಣ-ಪುಟ್ಟ ವಿಚಾರಕ್ಕೆ ಜಗಳ ನಡಯುತ್ತಿತ್ತು. ನಿನ್ನೆ ಸಂಜೆ ಮೋಹನ್ ಪತ್ನಿ ಸ್ವಾತಿಯನ್ನ ತನ್ನ ಮನೆಗೆ ಕರೆತಂದಿದ್ದನಂತೆ. ಆದರೆ ಮಗುವನ್ನ ಅತ್ತೆ ಮನೆಯಲ್ಲಿಯೇ ಬಿಟ್ಟು ಬಂದಿದ್ದ. ಮನೆಗೆ ಬಂದ ಕೆಲ ಹೊತ್ತಲ್ಲೇ ಮತ್ತೆ ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಒಂದು ಗಂಟೆ ಬಳಿಕ ಸ್ವಾತಿ ಸಹೋದರ ಅವರ ಮನೆಗೆ ಮಗುವನ್ನು ಕರೆದುಕೊಂಡು ಬಂದಿದ್ದಾನೆ. ಇದೇ ವೇಳೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಸ್ವಾತಿಯನ್ನು ನೋಡಿ ಶಾಕ್​ ಆಗಿದ್ದಾನೆ. ಮನೆಯಿಂದ ಪರಾರಿಯಾಗಿದ್ದ ಪತಿ ಮೋಹನ್ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿಯೇ ಶವ ಪತ್ತೆಯಾಗಿದ್ದಾನೆ.

ಇದನ್ನೂ ಓದಿ: ರವಿವರ್ಮನ ಚಿತ್ರಪಟದಲ್ಲಿದ್ದಂತೆ ಕಾಣಿಸಿಕೊಂಡ ತುಂಬು ಗರ್ಭಿಣಿ ಹರ್ಷಿಕಾ ಪೂಣಚ್ಚ; ದೃಷ್ಟಿ ಆಗುತ್ತೆ ಎಂದ ಫ್ಯಾನ್ಸ್

ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಮೃತಳ ಕುಟುಂಬಸ್ಥರು ನಮ್ಮ ಮಗಳನ್ನು ಗಂಡ ಮೋಹನ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದರು. ಮಾತ್ರವಲ್ಲದೆ, ಅಳಿಯನ ಮನೆಯಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದರು. ಇದರಿಂದ 10 ಲಕ್ಷಕ್ಕೂ ಅಧಿಕ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಂಡ್ಯದಲ್ಲಿ ಗಂಡ, ಹೆಂಡತಿ ದುರಂತ ಅಂತ್ಯ.. ಒಂದು ವರ್ಷದ ಹೆಣ್ಣು ಮಗು ಅನಾಥ; ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2024/08/mnd.jpg

Load More