ಹೆಂಡತಿಯನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ.. ಹಾಸನದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ

author-image
AS Harshith
Updated On
ಹೆಂಡತಿಯನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ.. ಹಾಸನದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ
Advertisment
  • ತಾಳಿ ಕಟ್ಟಿದ ಪತ್ನಿಯನ್ನೇ ಕೈಯಾರೆ ಕೊಂದ ಗಂಡ
  • ಆಕೆಯನ್ನು ಕೊಲೆ ಮಾಡುವಷ್ಟು ಗಂಡನಿಗೆ ಸಿಟ್ಟೇಕೆ?
  • ನಾಡ ಬಂದೂಕಿನಿಂದ ಗುಂಡು ಹಾರಿಸಿ ಮುಗಿಸಿಯೇ ಬಿಟ್ಟ

ಹಾಸನ: ಗಂಡನನೋರ್ವ ತನ್ನ ಹೆಂಡತಿಯನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರು ತಾಲ್ಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ. ಹರೀಶ್ (50) ಎಂಬಾತ ಪತ್ನಿ ಜಾಜಿ (45) ಎಂಬಾಕೆಯನ್ನು ಕೊಲೆ ಮಾಡಿದ್ದಾನೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೌಟುಂಬಿಕ ಕಲಹ ಹಿನ್ನಲೆ ಹರೀಶ್​ ತನ್ನ ಪತ್ನಿಯನ್ನು ಕೊಲೆಗೈದಿದ್ದಾನೆ ಎನ್ನಲಾಗುತ್ತಿದೆ. ಪ್ರತಿನಿತ್ಯ ಒಂದಲ್ಲ ಒಂದು ಕಾರಣಕ್ಕೆ ಪತಿ-ಪತ್ನಿ ಜಗಳವಾಡುತ್ತಿದ್ದರು. ನಿನ್ನೆ ರಾತ್ರಿ ವಿಕೋಪಕ್ಕೆ ತಿರುಗಿದ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಇದನ್ನೂ ಓದಿ: ಆಂಟಿ ಜೊತೆಗೆ ಬಾಲಕನ ಲವ್​! 16 ವರ್ಷದ ಅಪ್ರಾಪ್ತನೊಂದಿಗೆ 28 ವರ್ಷದ ವಿವಾಹಿತ ಮಹಿಳೆ ಎಸ್ಕೇಪ್!

ಪತಿ ಹರೀಶ್ ಮನೆಯಲ್ಲಿಯೇ ಪತ್ನಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ನಂತರ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್​ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್.. ಚಿಕ್ಕಣ್ಣನ ಬೆನ್ನಲ್ಲೇ ‘ಗರಡಿ’ ನಟನಿಗೂ ಸಂಕಷ್ಟ! ಠಾಣೆಗೆ ಬನ್ನಿ ಎಂದ ಪೊಲೀಸರು

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment