ತನ್ನ ಪತ್ನಿಯನ್ನೇ ಭೀಕರವಾಗಿ ಕೊಂದ ಪತಿ
ಬಸವೇಶ್ವನಗರದ ಮಂಜುನಾಥನಗರದಲ್ಲಿ ದುರ್ಘಟನೆ
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ
ಬೆಂಗಳೂರು: ಮಹಿಳೆಯೊಬ್ಬರನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಬಸವೇಶ್ವನಗರದ ಮಂಜುನಾಥನಗರದಲ್ಲಿ ನಡೆದಿದೆ. ನಾಗರತ್ನ (32) ಕೊಲೆಯಾದ ಮಹಿಳೆ.
ಕೊಲೆಯಾದ ಮಹಿಳೆ ಗಂಡ ಅಯ್ಯಪ್ಪ ಎಂಬಾತ ಚಾಕುವಿನಿಂದ ಮನಸೋ ಇಚ್ಛೆ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಅನೈತಿಕ ಸಂಬಂಧದ ಅನುಮಾನದ ಹಿನ್ನೆಲೆಯಲ್ಲಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮೃತ ನಾಗರತ್ನ 12 ವರ್ಷಗಳ ಹಿಂದೆ ಅಯ್ಯಪ್ಪ ಜೊತೆ ಮದುವೆಯಾಗಿದ್ದರು. ಈ ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳಿದ್ದಾರೆ. ಇಬ್ಬರು ಮಕ್ಕಳನ್ನು ತನ್ನ ಅಕ್ಕನ ಮನೆಯಲ್ಲಿ ಬಿಟ್ಟಿದ್ದ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಬಸವೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಮೃತದೇಹವನ್ನು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ