newsfirstkannada.com

ಶೀಲ ಶಂಕಿಸಿ ಹೆಂಡತಿ ಕತ್ತು ಸೀಳಿ ಬರ್ಬರವಾಗಿ ಕೊಂದ ಗಂಡ.. ಬೆಚ್ಚಿಬಿದ್ದ ಜನ

Share :

17-09-2023

    ಗೌರಿಬಿದನೂರು ತಾಲೂಕಿನ ಅಲಕಾಪುರ ಕ್ರಾಸ್ ಬಳಿ ಘಟನೆ

    ಅಂಜುಮನ್ ಖಾನ್ (30) ಕೊಲೆ ಮಾಡಿದ ಆರೋಪಿ ಪತಿ

    ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲು

ಚಿಕ್ಕಬಳ್ಳಾಪುರ: ಪತ್ನಿಯ ಶೀಲ ಶಂಕಿಸಿ ನಡು ರಸ್ತೆಯಲ್ಲೇ ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದ ಘಟನೆ ಗೌರಿಬಿದನೂರು ತಾಲೂಕಿನ ಅಲಕಾಪುರ ಕ್ರಾಸ್ ಬಳಿ ನಡೆದಿದೆ. ಹಿಂದೂಪುರ ಮೂಲದ ಶಾನವಾಜ್ (28) ಕೊಲೆಯಾದ ಮಹಿಳೆ. ಅಲಕಾಪುರ ಗ್ರಾಮದ ಅಂಜುಮನ್ ಖಾನ್ (30) ಕೊಲೆ ಮಾಡಿದ ಆರೋಪಿ.

ಕೆಲವು ವರ್ಷಗಳ ಹಿಂದೆ ಈ ಜೋಡಿ ಮದುವೆಯಾಗಿದ್ದರು. ಆರಂಭದಲ್ಲಿ ಈ ಇಬ್ಬರ ಸಂಸಾರ ಚೆನ್ನಾಗಿಯೇ ಇತ್ತು. ಆದರೆ ಇತ್ತೀಚೆಗೆ ಪತಿಯು ಹೆಂಡತಿಯ ಶೀಲದ ಮೇಲೆ ಅನುಮಾನ ಪಟ್ಟಿದ್ದ. ಪತ್ನಿ ಬೇರೆ ಪುರುಷರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಕೋಪಗೊಂಡು ಚಾಕುವಿನಿಂದ ಚುಚ್ಚಿ ಹತ್ಯೆಗೈದಿದ್ದಾನೆ.

ಇನ್ನೂ, ಬರ್ಬರವಾಗಿ ಕೊಲೆ ಮಾಡಿದ ಬಳಿಕ ನೇರವಾಗಿ ಗೌರಿಬಿದನೂರು ಗ್ರಾಮಾಂತರ ಠಾಣೆಗೆ ಹೋಗಿದ್ದಾನೆ. ಹೆಂಡತಿಯನ್ನು ಕೊಲೆ ಮಾಡಿದ್ದೇನೆ ಎಂದು ಪೊಲೀಸ್​ ಅಧಿಕಾರಿಗಳಿಗೆ ಹೇಳಿದ್ದಾರೆ. ಆರೋಪಿಯ ಮಾತನ್ನು ಕೇಳಿದ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಪತಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶೀಲ ಶಂಕಿಸಿ ಹೆಂಡತಿ ಕತ್ತು ಸೀಳಿ ಬರ್ಬರವಾಗಿ ಕೊಂದ ಗಂಡ.. ಬೆಚ್ಚಿಬಿದ್ದ ಜನ

https://newsfirstlive.com/wp-content/uploads/2023/09/husband-1.jpg

Load More