newsfirstkannada.com

ರಾಡ್​ನಿಂದ ತಲೆಗೆ ಹೊಡೆದು ಪತ್ನಿಯ ಬರ್ಬರ ಕೊಲೆ; ಅಸಲಿಗೆ ದಂಪತಿ ಮಧ್ಯೆ ಆಗಿದ್ದೇನು?

Share :

Published May 12, 2024 at 8:20pm

  ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗೇಟ್ ಬಳಿ ನಡೆದ ಘಟನೆ

  ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದಕ್ಕೆ ಸ್ಥಳದಲ್ಲೇ ಮೃತಪಟ್ಟ ಮಹಿಳೆ

  ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ

ರಾಮನಗರ: ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಕನಕಪುರ ತಾಲೂಕಿನ ದೊಡ್ಡಮುದುವಾಡಿ ಗೇಟ್ ಬಳಿ ನಡೆದಿದೆ. ಮಂಜುಳಾ ಪತಿಯಿಂದಲೇ ಕೊಲೆಯಾದ ಮಹಿಳೆ.

ಇದನ್ನೂ ಓದಿ: ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿ ಪವಿತ್ರ ಜಯರಾಂ ದುರಂತ ಅಂತ್ಯ

ಮೃತ ಮಹಿಳೆಯು ಪಿಚ್ಚನಕೆರೆ ಗ್ರಾಮದ ನಿವಾಸಿ. ಪತಿ ರಾಜೇಶ್ ಎಂಬಾತ ರಾಡ್​ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಅಂತ ಆರೋಪ ಕೇಳಿ ಬಂದಿದೆ. ಈ ಹಿಂದೆ ಕೌಟುಂಬಿಕ ಕಲಹದಿಂದ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರಂತೆ. ಇದರ ನಡುವೆ ಪತಿ ರಾಜೇಶ್​ ಆಗಾಗ ಪತ್ನಿ ಮಂಜುಳಾಗೆ ಕಿರುಕುಳ ನೀಡುತ್ತಿದ್ದನಂತೆ.

ಆದರೆ ಇಂದು ದೊಡ್ಡಮುದುವಾಡಿ ಗೇಟ್ ಬಸ್ ನಿಲ್ದಾಣದ ಬಳಿ ನಿಂತಿದ್ದಾಗ ಪತ್ನಿ ಮೇಲೆ ರಾಡ್​ನಿಂದ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನಂತೆ. ರಾಡ್​ನಿಂದ ತಲೆಗೆ ಪೆಟ್ಟು ಬಿದ್ದ ಕಾರಣ ತೀವ್ರ ರಕ್ತಸ್ರಾವದಿಂದ ಮಂಜುಳ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕನಕಪುರ ಗ್ರಾಮಾಂತರ  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಜುಳಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಮಾಡಿ ಪರಾರಿಯಾದ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಡ್​ನಿಂದ ತಲೆಗೆ ಹೊಡೆದು ಪತ್ನಿಯ ಬರ್ಬರ ಕೊಲೆ; ಅಸಲಿಗೆ ದಂಪತಿ ಮಧ್ಯೆ ಆಗಿದ್ದೇನು?

https://newsfirstlive.com/wp-content/uploads/2024/05/death2.jpg

Load More