ಪತ್ನಿಯನ್ನು ಕೊಚ್ಚಿ ಕೊಂದ ಪತಿ
ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ
16 ವರ್ಷದ ಪ್ರೀತಿ ಕೊಲೆಯಲ್ಲಿ ಕೊನೆ
ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನಲೆ ಪತಿಯೇ ತನ್ನ ಪತ್ನಿಯನ್ನ ಮಚ್ಚಿನ ಕೊಚ್ಚಿ ಬರ್ಬರ ಕೊಲೆಗೈದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೊಂಡ್ಲಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅದೇ ಗ್ರಾಮದ ವಿನೋದಮ್ಮ (38) ಕೊಲೆಯಾದ ಮಹಿಳೆ.
ಕೆ ಎಸ್ ಸುರೇಶ್ (40) 16 ವರ್ಷಗಳ ಹಿಂದೆ ವಿನೋದಮ್ಮನನ್ನು ಪ್ರೀತಿಸಿ ಮದುವೆಯಾಗಿದ್ದ. ಇವರಿಬ್ಬರದ್ದು ಅಂತರ್ಜಾತಿ ವಿವಾಹವಾದರು ಇತ್ತೀಚೆಗೆ ದಂಪತಿ ನಡುವೆ ಘರ್ಷಣೆ ನಡೆಯುತ್ತಿತ್ತು. ವೈಮನಸ್ಸು ಉಂಟಾಗಿ ಇಬ್ಬರ ನಡುವೆ ಜಗಳ ತಾರಕಕ್ಯುಕೇರುತಿತ್ತು. ಸುರೇಶ್ ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಆಗಾಗ ಜಗಳಕ್ಕಿಳಿಯುತ್ತಿದ್ದನು. ಇದೇ ಕಾರಣಕ್ಕೆ ಆಕೆಯನ್ನ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ.
ಇಂದು ಬೆಳಗ್ಗೆ ಕೂಡ ಸುರೇಶ್ ಮತ್ತು ವಿನೋದಮ್ಮ ನಡುವೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಸುರೇಶ್ ತನ್ನ ಪತ್ನಿಯನ್ನು ಮಚ್ಚಿನಿಂದ ಕುತ್ತಿಗೆ ಹಾಗೂ ತಲೆ ಭಾಗಕ್ಕೆ ಕೊಚ್ಚಿ ಬರ್ಬರವಾಗಿ ಕೊಲೆಗೈದಿದ್ದಾನೆ. ಕೊಲೆ ನಡೆದ ಸ್ಥಳಕ್ಕೆ ಎಎಸ್ಪಿ ಕುಶಾಲ್ ಚೌಕ್ಸೆ ಹಾಗೂ ಬಟ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಸುರೇಶ್ ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.