newsfirstkannada.com

ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಮೋದಿ ಕಂಬನಿ, ಟ್ವೀಟ್ ಮಾಡಿ ಏನಂದ್ರು ಪ್ರಧಾನಿ..?

Share :

Published April 29, 2024 at 10:15am

  ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ನಿಧನ

  ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಶ್ರೀನಿವಾಸ್ ಪ್ರಸಾದ್

  ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಸಂತಾಪ ಸೂಚನೆ

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಂಬನಿ ಮಿಡಿದಿದ್ದಾರೆ. ಎಕ್ಸ್​ ಖಾತೆಯಲ್ಲಿ ನೋವನ್ನು ತೋಡಿಕೊಂಡಿರುವ ಮೋದಿ, ಶ್ರೀನಿವಾಸ್ ಪ್ರಸಾದ್​ ಅವರ ಅಗಲಿಕೆಯ ಸುದ್ದಿ ಕೇಳಿ ತುಂಬಾ ನೋವು ಉಂಟಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಕೊಹ್ಲಿ, ಜಾಕ್ಸ್​ ಸಿಡಿಲಬ್ಬರದ ಘರ್ಜನೆ.. 16 ಸಿಕ್ಸರ್, 12 ಫೋರ್​​​.. ನಿನ್ನೆಯ ಪಂದ್ಯದ ರೋಚಕ ಕ್ಷಣಗಳು

ಚಾಮರಾಜನಗರದ ಹಿರಿಯ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನದ ಸುದ್ದಿ ಅತೀವ ನೋವು ತಂದಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು. ಬಡವರು, ದೀನ ದಲಿತರ ಕಲ್ಯಾಣಕ್ಕಾಗಿ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ತಮ್ಮ ಸಮಾಜ ಸೇವೆಗಳಿಂದಾಗಿ ಜನಪ್ರಿಯತೆ ಹೊಂದಿದ್ದರು. ಅವರ ಕುಟುಂಬಕ್ಕೆ, ಬೆಂಬಲಿಗರಿಗೆ ನೋವು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿಅಬ್ಬಾಬ್ಬ..! ಡೇರಿಲ್ ಮಿಚೆಲ್ ನಿನ್ನೆ ಹಿಡಿದ ಕ್ಯಾಚ್​ಗಳು ಎಷ್ಟು ಗೊತ್ತಾ? Catches Win Matches ಅನ್ನೋದು ಪ್ರೂವ್..!

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ. 76 ವರ್ಷ ವಯಸ್ಸಿನ ಶ್ರೀನಿವಾಸ್ ಪ್ರಸಾದ್ ಅವರು ಪೂರ್ಣ ಹೆಸರು ವೆಂಕಟಯ್ಯ ಶ್ರೀನಿವಾಸ್ ಪ್ರಸಾದ್. ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದ ಇವರು ನಂಜನಗೂಡು ಕ್ಷೇತ್ರವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಚಾಮರಾಜನಗರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಆರು ಬಾರಿ ಸಂಸದರರಾಗಿದ್ದರು. 2008, 2013ರಲ್ಲಿ ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ವಾಜಪೇಯಿ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಆದರೆ ಅನಾರೋಗ್ಯಕ್ಕೆ ತುತ್ತಾದ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ:Breaking: ಬಿಜೆಪಿ ಹಿರಿಯ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಮೋದಿ ಕಂಬನಿ, ಟ್ವೀಟ್ ಮಾಡಿ ಏನಂದ್ರು ಪ್ರಧಾನಿ..?

https://newsfirstlive.com/wp-content/uploads/2024/04/Narendra-modi-1.jpg

Load More