newsfirstkannada.com

ಲೋಕಸಭಾ ಚುನಾವಣೆ ಹೊತ್ತಲ್ಲೇ ಮಾಜಿ ಪ್ರಧಾನಿ ದೇವೇಗೌಡ್ರು ಶಾಕಿಂಗ್​ ನಿರ್ಧಾರ.. ಏನದು..?

Share :

Published January 13, 2024 at 7:51pm

    90 ವರ್ಷ ಆಗಿದೆ, ನಾನು ಚುನಾವಣೆಯಲ್ಲಿ ಕಂಟೆಸ್ಟ್ ಮಾಡಲ್ಲ

    ಗೆಲುವಿನ ಅವಶ್ಯಕತೆ ಎಲ್ಲಿದೆಯೋ ಅಲ್ಲಿ ಪ್ರಚಾರಕ್ಕೆ ಹೋಗ್ತೀನಿ

    ಅಭ್ಯರ್ಥಿಗಳ ಪ್ರಚಾರಕ್ಕೆ ಹೋಗ್ತೀನಿ ಎಂದ ಹೆಚ್​​.ಡಿ ದೇವೇಗೌಡ

ಬೆಂಗಳೂರು: ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಹೇಳಿದರು.

ಇನ್ನು, ಈ ಸಂಬಂಧ ಜೆಡಿಎಸ್​​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಮಾಡಿಲ್ಲ. ಗಾಳಿ ಸುದ್ದಿಗಳ ಬಗ್ಗೆ ನಾನು ಮಾತನಾಡಲ್ಲ. ಮೋದಿ ಅವರು ಏನಾದರೂ ಹೇಳಿದರೇ ಆಗ ನಾವೆಲ್ಲಾ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ ಶಕ್ತಿ ಇದೆ, ಓಡಾಡಲು ಕಷ್ಟವಾಗುತ್ತದೆ. ಆದರೂ‌ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ.

ಇದನ್ನು ಓದಿ: BREAKING: ಅಗ್ನಿ ಅವಘಡ.. ಬಹುಮಹಡಿ ಕಟ್ಟಡದಲ್ಲಿ ಭಾರೀ ಬೆಂಕಿ.. ಅಸಲಿಗೆ ಆಗಿದ್ದೇನು?

ಸಿದ್ದರಾಮಯ್ಯ ರಾಮನ ದರ್ಶನ ಮಾಡಿಕೊಂಡು ಬರಲಿ ಎಂದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ!

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಮನ ದರ್ಶನ ಮಾಡಿಕೊಂಡು ಬರಲಿ. ಸಿಎಂ ಸಿದ್ದರಾಮಯ್ಯ ಅವರು ಅಯೋಧ್ಯೆಗೆ ಜನವರಿ 22ರಂದು ಹೋಗುವುದಿಲ್ಲ, ನಂತರ ಹೋಗುತ್ತೇನೆಂದು ಹೇಳಿದ್ದಾರೆ. ಅವರ ಪಕ್ಷ ನಿರ್ಧಾರ ತೆಗೆದುಕೊಂಡಿದೆ. ಮುಜರಾಯಿ ಇಲಾಖೆ ದೇವಾಲಯದಲ್ಲಿ ಪೂಜೆಗೆ ಸೂಚಿಸಿದೆ. ಸಾಫ್ಟ್ ಹಿಂದುತ್ವವೋ, ಹಾರ್ಡ್ ಹಿಂದುತ್ವವೋ ಒಟ್ಟಿನಲ್ಲಿ ಸಿದ್ದರಾಮಯ್ಯ ರಾಮನ ದರ್ಶನ ಮಾಡಿಕೊಂಡು ಬರಲಿ. ಶ್ರೀರಾಮನ ಆಶೀರ್ವಾದ ಪಡೆದುಕೊಳ್ಳಲಿ. ನಾನು ಆಯೋಧ್ಯೆಗೆ ಭೇಟಿ ನೀಡುತ್ತೇನೆ. ಸಿದ್ದರಾಮಯ್ಯ ಯುವನಿಧಿ ಕಾರ್ಯಕ್ರಮ ತಂದಿದ್ದಾರೆ. ಒಳ್ಳೆಯದು, ನಾನು ಅದನ್ನ ಅಭಿನಂದಿಸುತ್ತೇನೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಲೋಕಸಭಾ ಚುನಾವಣೆ ಹೊತ್ತಲ್ಲೇ ಮಾಜಿ ಪ್ರಧಾನಿ ದೇವೇಗೌಡ್ರು ಶಾಕಿಂಗ್​ ನಿರ್ಧಾರ.. ಏನದು..?

https://newsfirstlive.com/wp-content/uploads/2023/07/HDD_JDS.jpg

Load More