‘ಬಿ.ಕೆ.ಹರಿಪ್ರಸಾದ್ ಮುಖ್ಯಮಂತ್ರಿ ಆಗುವ ಅರ್ಹತೆ ಹೊಂದಿದ್ದಾರೆ’
ಹರಿಪ್ರಸಾದ್ರನ್ನು ತುಳಿದಿದ್ದು ಯಾರೆಂದು ತಿಳಿಸಿದ ಈಡಿಗ ಸ್ವಾಮೀಜಿ
ನಂಗೆ ಸಿಎಂ ಆಯ್ಕೆ ಮಾಡೋದು, ಇಳಿಸೋದು ಗೊತ್ತು-ಹರಿಪ್ರಸಾದ್
ಬೆಂಗಳೂರು: ಈಡಿಗರ ಸಮಾವೇಶದಲ್ಲಿ ಒಬ್ಬರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಲು ಗೊತ್ತು, ಅದೇ ವ್ಯಕ್ತಿಯನ್ನು ಕಳಗೆ ಇಳಿಸೋದು ಗೊತ್ತು ಅನ್ನೋ ಮೂಲಕ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್, ಮುಖ್ಯಂತ್ರಿ ಸಿದ್ದರಾಮಯ್ಯಗೆ ಪರೋಕ್ಷವಾಗಿ ಎಚ್ಚರಿಕೆಯನ್ನು ನೀಡಿದ್ದರು.
ಹರಿಪ್ರಸಾದ್ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ, ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಈ ರಾಜ್ಯದಲ್ಲಿ ಕೇವಲ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಂದ ಮಾತ್ರ ಈ ಸರ್ಕಾರ ಬಂದಿಲ್ಲ. ಹರಿಪ್ರಸಾದ್ ಕೂಡ ರಾಜ್ಯಾದ್ಯಂತ ಪ್ರವಾಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಕೆಲಸ ಮಾಡಿದ್ದಾರೆ ಎಂದು ಗುಡುಗಿದ್ದಾರೆ.
ಅವರು ಕೂಡ ಸಿಎಂ ಆಗುವ ಎಲ್ಲಾ ಅರ್ಹತೆಗಳನ್ನೂ ಹೊಂದಿದ್ದಾರೆ. ಇವರನ್ನು ಮೂಲ ಕಾಂಗ್ರೆಸ್ ನವರು ಯಾರೂ ತುಳಿದಿಲ್ಲ. ಹೊರಗಿನಿಂದ ಬಂದವರೇ ಹರಿಪಸ್ರಾದ್ರನ್ನು ತುಳಿದಿದ್ದಾರೆ. ಬಿಜೆಪಿ ಅವಧಿಯಲ್ಲಿ ಎರಡು ಸಚಿವ ಸ್ಥಾನ ಕೊಟ್ಟಿದ್ದರು. ಈಗ ಗುರು ನಾರಾಯಣ ನಿಗಮಕ್ಕೆ ಹಣ ಕೊಡದೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು -ಸಿದ್ದರಾಮಯ್ಯಗೆ ಬಿ.ಕೆ ಹರಿಪ್ರಸಾದ್ ಎಚ್ಚರಿಕೆ..!
ನಮ್ಮ ಸಮುದಾಯವನ್ನ ಹೇಗೆ ಬೇಕೋ ಹಾಗೆ ಬಳಸಿಕೊಳ್ಳುತ್ತಿದ್ದಾರೆ. ನಮ್ಮದು ಅತಿ ದೊಡ್ಡ ಸಮುದಾಯ. ಮುಂಬರುವ ಲೋಕಸಭಾ, ಜಿಪಂ, ತಾಪಂ ಚುನಾವಣೆಗಳಿವೆ. ಮುಂದಿನ ದಿನಗಳಲ್ಲಿ ಸಮುದಾಯದಿಂದ ಹೋರಾಟ ನಡೆಯಲಿದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ