Advertisment

ಗೃಹಲಕ್ಷ್ಮಿಯರಿಗೆ ₹10,000, ಪ್ರತಿ ಸಿಲಿಂಡರ್ ₹500; ರಾಜಸ್ಥಾನದಲ್ಲಿ ಕಾಂಗ್ರೆಸ್‌ ಗೆದ್ದರೆ 7 ಗ್ಯಾರಂಟಿ ಯೋಜನೆ ಜಾರಿ

author-image
admin
Updated On
ಗೃಹಲಕ್ಷ್ಮಿಯರಿಗೆ ₹10,000, ಪ್ರತಿ ಸಿಲಿಂಡರ್ ₹500; ರಾಜಸ್ಥಾನದಲ್ಲಿ ಕಾಂಗ್ರೆಸ್‌ ಗೆದ್ದರೆ 7 ಗ್ಯಾರಂಟಿ ಯೋಜನೆ ಜಾರಿ
Advertisment
  • ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆ ಯಜಮಾನಿಗೆ ₹10,000 ಗೌರವಧನ
  • ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅಥವಾ ಟ್ಯಾಬ್ಲೆಟ್
  • ಚಿರಂಜೀವಿ ಆರೋಗ್ಯ ವಿಮಾ ಯೋಜನೆ ₹25 ಲಕ್ಷದಿಂದ ₹50 ಲಕ್ಷಕ್ಕೆ ಏರಿಕೆ

ಜೈಪುರ: 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆದ್ದಾಗಿದೆ. ಇದೇ ಮಾದರಿಯನ್ನು ರಾಜಸ್ಥಾನದಲ್ಲೂ ಪ್ರಯೋಗ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಜೈಪುರ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನ ಸಿಎಂ ಅಶೋಕ್ ಗೆಹಲೋಟ್ ಅವರು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.

Advertisment

ನವೆಂಬರ್ 25 ರಂದು ರಾಜಸ್ಥಾನದಲ್ಲಿ ಮತದಾನ ನಡೆಯಲಿದ್ದು, ಇಂದು ಕಾಂಗ್ರೆಸ್ ದಿಗ್ಗಜ ನಾಯಕರು ಜನ ಘೋಷಣಾ ಪತ್ರ ಬಿಡುಗಡೆ ಮಾಡಿದ್ದಾರೆ. ರಾಜಸ್ಥಾನ ಕೈ ನಾಯಕರು ಏಳು ಗ್ಯಾರಂಟಿ ಘೋಷಣೆಗಳನ್ನ ನೀಡಿದ್ದು, ಮತದಾರರಿಗೆ ಮನಗೆಲ್ಲುವ ವಿಶ್ವಾಸದಲ್ಲಿದ್ದಾರೆ.

ಕಾಂಗ್ರೆಸ್‌ ಗೆದ್ದರೆ 7 ಗ್ಯಾರಂಟಿ ಯೋಜನೆ

1. ಗೃಹಲಕ್ಷ್ಮಿ ಯೋಜನೆ ಖಾತರಿಯಡಿಯಲ್ಲಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ವಾರ್ಷಿಕ ₹ 10,000 ಗೌರವಧನ
2. ಪ್ರತಿ ಸಿಲಿಂಡರ್ ಗೆ ₹500ಯಂತೆ ಒಟ್ಟು 1.05 ಕೋಟಿ ಕುಟುಂಬಗಳಿಗೆ ಎಲ್‌ಪಿಜಿ ಸಿಲಿಂಡರ್
3. ಗೋಧಾನ ಖಾತ್ರಿಯಡಿ ಪ್ರತಿ ಕೆ.ಜಿ.ಗೆ ಸಗಣಿಗೆ ₹2ರಂತೆ ಖರೀದಿ
4. ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಗೆ ಕಾನೂನು
5. ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅಥವಾ ಟ್ಯಾಬ್ಲೆಟ್
6. ಪ್ರಾಕೃತಿಕ ವಿಕೋಪದಿಂದ ಆಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ ₹15 ಲಕ್ಷದವರೆಗೆ ವಿಮಾ ರಕ್ಷಣೆ
7. ಚಿರಂಜೀವಿ ಆರೋಗ್ಯ ವಿಮಾ ಯೋಜನೆ ₹25 ಲಕ್ಷದಿಂದ ₹50 ಲಕ್ಷಕ್ಕೆ ಏರಿಕೆ

ಇದಿಷ್ಟೇ ಅಲ್ಲದೇ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಗೆದ್ದರೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಸೇರಿದಂತೆ ಇತರ ಕಲ್ಯಾಣ ಯೋಜನೆಗಳಿಗೆ ಹೊಸ ಯೋಜನೆ ಜಾರಿಗೊಳಿಸುವ ಭರವಸೆಗಳನ್ನು ನೀಡಿದೆ. ಪ್ರಮುಖವಾಗಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿ ಸಮೀಕ್ಷೆ ನಡೆಸುವುದಾಗಿ ಕಾಂಗ್ರೆಸ್ ನಾಯಕರು ಘೋಷಣೆ ಮಾಡಿದ್ದಾರೆ.

Advertisment

ಪ್ರಧಾನಿ ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಕ್ಸಮರ ನಡೆಸಿದರು. ಅವರು ನಮ್ಮನ್ನು ನಿಂದಿಸಿದ್ದು ಬಿಟ್ಟರೆ ಬೇರೇನೂ ಮಾಡಿಲ್ಲ. ಬಿಜೆಪಿ ನಮ್ಮ ಯೋಜನೆಗಳನ್ನು ಕಾಪಿ ಮಾಡುತ್ತಿದೆ. ಆದರೆ ನೀವು ಎಷ್ಟೇ ಮಾಡಿದರೂ ರಾಜಸ್ಥಾನದಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ. ರಾಜಸ್ಥಾನದಲ್ಲಿ ಜಾತಿ ಗಣತಿ ನಡೆಸುವುದು ಖಚಿತ ಎನ್ನುವ ಭರವಸೆ ನೀಡಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment