/newsfirstlive-kannada/media/post_attachments/wp-content/uploads/2024/03/Gold-1.jpg)
ಚಿತ್ರದುರ್ಗ: ಲೋಕ ಸಭಾ ಚುನಾವಣೆಯ ಹೊತ್ತಲ್ಲಿ ಅಕ್ರಮ ಸಾಗಾಟ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚುನಾವಣಾ ಅಧಿಕಾರಿಗಳು ಕಣ್ಣು ತಪ್ಪಿಸಿ ಸೀರೆ, ಹಣ, ಬೆಳೆಬಾಳುವ ವಸ್ತುಗಳ ಸಾಗಾಟ ನಡೆಯುತ್ತಿದೆ. ಇದೀಗ ಅಂತಹದ್ದೇ ಪ್ರಕರಣವೊಂದು ಮುನ್ನೆಲೆಗೆ ಬಂದಿದ್ದು, ಸುಮಾರು 5kg 250 gm ಚಿನ್ನವನ್ನ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ವಿಜಯಾ ಬ್ಯಾಂಕ್ ಮುಂಭಾಗ ಈ ಘಟನೆ ಬೆಳಕಿಗೆ ಬಂದಿದೆ. ಹಿರಿಯೂರು ಬಪಟ್ಟಣದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಚಿನ್ನವನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಸುಮಾರು 3ಕೋಟಿ, 55 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ಎಫ್ಎಸ್ಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪರಿಶೀಲಿಸಿದಾಗ ಆತನ ಬಳಿ 5kg,250 gm ಚಿನ್ನ ಪತ್ತೆಯಾಗಿದೆ. ಇದು ದಾವಣಗೆರೆಯ ಮೂಲದ ಜ್ಯುವೆಲರಿ ಶಾಪ್ ಗೆ ಸೇರಿದ್ದು ಎನ್ನಲಾಗಿದೆ.
ಇದನ್ನೂ ಓದಿ: ಇಂದಿನಿಂದ 14 ಕ್ಷೇತ್ರಗಳಿಗೆ ನಾಮಿನೇಷನ್ ಶುರು.. ಡಿ.ಕೆ ಸುರೇಶ್ ರೆಡಿ.. ಡಾ. ಮಂಜುನಾಥ್ ನಾಮಪತ್ರ ಸಲ್ಲಿಸೋದ್ಯಾವಾಗ?
ಮನೋಜ ಎಂಬ ವ್ಯಕ್ತಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದನು. ಈತ ಪೊಲೀಸರನ್ನು ಕಂಡಂತೆ ಓಡಿ ಹೋಗಲು ಯತ್ನಿಸಿದ್ದಾನೆ. ಬಳಿಕ ಆತನನ್ನು ಪೊಲೀಸರು ಹಿಡಿದಿದ್ದಾರೆ. ಸದ್ಯ ಇಷ್ಟು ಬಂಗಾರ ಎಲ್ಲಿಂದ ಬಂತು? ಎಲ್ಲಿಗೆ ಸಾಗಿಸುತ್ತಿದ್ದ? ಎಂಬುದು ತಿಳಿದು ಬರಬೇಕಿದೆ. ಸದ್ಯ ಹಿರಿಯೂರು ನಗರ ಪೊಲೀಸರು ಮನೋಜ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ. ತಹಶೀಲ್ದಾರ್ ರಾಜೇಶ್, ಹಾಗೂ ಸಿಪಿಐ ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ತಪಾಸಣೆ ನಡೆಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ