/newsfirstlive-kannada/media/post_attachments/wp-content/uploads/2024/05/heat-wave.jpg)
ಬೆಂಗಳೂರು: ಇದು ಮಾರ್ಚ್ ತಿಂಗಳ ಕೊನೆ. ಸುಡೋ ಬಿಸಿಲಿಗೆ ಜನ ಬೇಸತ್ತು ಹೋಗಿದ್ದಾರೆ. ಈ ವರ್ಷ ಮಾರ್ಚ್ ತಿಂಗಳಲ್ಲಿ ಸೂರ್ಯನ ಶಾಖ ಹೆಚ್ಚಾಗಿದ್ದು, ಹಲವು ನಗರಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲೆ ಬರೆದಿದೆ. ಈ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಹವಾಮಾನ ಇಲಾಖೆ ಮಹತ್ವದ ಅಲರ್ಟ್ ನೀಡಿದೆ.
ರಾಜ್ಯ ಹವಾಮಾನ ಇಲಾಖೆ ಬೆಂಗಳೂರು ನಗರಕ್ಕೆ ನಾಳೆ ಮತ್ತು ನಾಡಿದ್ದು ಅಲರ್ಟ್ ಘೋಷಣೆ ಮಾಡಿದೆ. ಬುಧವಾರ ನಗರದಾದ್ಯಂತ ಬಿಸಿಲು ಹೆಚ್ಚಾಗಿದ್ದು, ಗರಿಷ್ಠ ಉಷ್ಣಾಂಶ 35ಕ್ಕೂ ಹೆಚ್ಚು ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದು ಅಲರ್ಟ್ ನೀಡಿದೆ.
ಕೇವಲ ಬೆಂಗಳೂರು ಮಾತ್ರವಲ್ಲ ಇಡೀ ರಾಜ್ಯಾದ್ಯಂತ ತುಂಬಾ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಸಾಮಾನ್ಯಕ್ಕಿಂತ 6.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ ಎಂದು ತಿಳಿದು ಬಂದಿದೆ.
ಬಿಸಿಲಿನಿಂದ ಬಚಾವ್ ಆಗಲು ಏನು ಮಾಡಬೇಕು?
ಬಾಯಾರಿಕೆ ಇಲ್ಲದಿದ್ರೂ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಬೇಕು. ಮಧ್ಯಾಹ್ನದ ಪೀಕ್ ಅವರ್‌ನಲ್ಲಿ ಮನೆಯಿಂದ ಹೊರಗೆ ಹೋಗುವಾಗ ಟೋಪಿ ಅಥವಾ ಛತ್ರಿ ಬಳಸಬೇಕು. ಹೀಟ್ ಸ್ಟ್ರೋಕ್ನಿಂದ ತಲೆ ತಿರುಗುವಿಕೆ, ತಲೆನೋವು, ವಾಕರಿಕೆ, ಬೆವರು ಮತ್ತು ರೋಗಗ್ರಸ್ತ ಆಗುವಿಕೆ ಲಕ್ಷಣಗಳು ಕಂಡು ಬಂದರೆ ಚಿಕಿತ್ಸೆ ಪಡೆಯಬೇಕು ಎಂದು ಎಚ್ಚರಿಕೆ ನೀಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ