newsfirstkannada.com

ರಾಜ್ಯದಲ್ಲಿ ಮುಂದಿನ 10 ದಿನ ಗುಡುಗು ಸಹಿತ ಭಾರೀ ಮಳೆ; ಹೈ ಅಲರ್ಟ್ ಘೋಷಣೆ

Share :

29-06-2023

    ಇಡೀ ರಾಜ್ಯಾದಂತ ಮುಂದಿನ 2 ವಾರಗಳ ಕಾಲ ಭಾರೀ ಮಳೆ ಸಾಧ್ಯತೆ

    ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದಿಂದ ಹೈ ಅಲರ್ಟ್​​​

    ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸರ್ಕಾರದ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 10 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಇನ್ನು ಎರಡು ವಾರಗಳ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ಇನ್ನು, ಇಡೀ ರಾಜ್ಯಾದ್ಯಂತ ಅತೀ ಹೆಚ್ಚು ಎಂದರೆ 244.4 ಮಿಲಿ ಮೀಟರ್ ಮಳೆ ಬೀಳಲಿದೆ. ಕರಾವಳಿ ಜಿಲ್ಲೆಯಲ್ಲಿ ಮಾತ್ರ 64 ಮಿಲಿ ಮೀಟರ್​​​ ಮಳೆ ಸುರಿಯಲಿದೆ ಎಂದು ಹೇಳಿದೆ. ಬೆಂಗಳೂರು, ಕೋಲಾರ, ಮೈಸೂರು, ಕೊಡಗು, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆ ಆಗುವ ಸಂಭವವಿದೆ.

ಭಾರೀ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತ ಆಗಬಹುದು. ಇದರ ಪರಿಣಾಮ ರಾಜ್ಯದ ಜನ ಮಳೆಯಿಂದ ಪರಿದಾಡುವ ಸ್ಥಿತಿ ನಿರ್ಮಾಣವಾಗಲಿದೆ. ಅಗತ್ಯ ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಉಪಕರಣಗಳ ನಿಯೋಜನೆಗೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದಲ್ಲಿ ಮುಂದಿನ 10 ದಿನ ಗುಡುಗು ಸಹಿತ ಭಾರೀ ಮಳೆ; ಹೈ ಅಲರ್ಟ್ ಘೋಷಣೆ

https://newsfirstlive.com/wp-content/uploads/2023/06/Heavy-Rain.jpg

Load More