/newsfirstlive-kannada/media/post_attachments/wp-content/uploads/2024/05/Heavy-Rains-Karnataka.jpg)
ಬೆಂಗಳೂರು: ಮಳೆ ಕಾಟ ಮುಗಿದು ಹೋಯ್ತು, ಚಳಿಗಾಲ ಶುರುವಾಯ್ತು. ಮುಂದೆ ಬೇಸಿಗೆ ಕಾಲ ಬರುತ್ತೆ ಎಂದು ಜನ ನೆಮ್ಮದಿ ಆಗಿದ್ದಾರೆ. ಈ ಮಧ್ಯೆಯೇ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಪದೇ ಪದೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿರೋ ಕಾರಣ ರಾಜ್ಯದ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ತಿಳಿದು ಬಂದಿದೆ.
ಗುಡುಗು ಸಹಿತ ಮಳೆ ಸಾಧ್ಯತೆ
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಮಳೆ ಆಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮಡಿಕೇರಿ, ಮೈಸೂರಲ್ಲೂ ಮಳೆ ಬೀಳಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು, ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.
ಜನವರಿ 2 ಮತ್ತು 3ನೇ ತಾರೀಕು ಜೋರು ಮಳೆ ಬೀಳಲಿದೆ. ನಾಳೆ ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನದ ಮೇಲೆ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಇದನ್ನೂ ಓದಿ:ಸ್ಟಾರ್ ಆಟಗಾರನಿಗೆ ಬಿಗ್ ಶಾಕ್; ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ಗೆ KKR ಕ್ಯಾಪ್ಟನ್ಸಿ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್