ಮುಂದಿನ 48 ಗಂಟೆ ವರುಣನ ಆರ್ಭಟ; ಎಚ್ಚರ! ಮಳೆಯಲ್ಲಿ ನೆನೆದರೆ ಶೀತ, ನೆಗಡಿ, ಕೆಮ್ಮು ಗ್ಯಾರಂಟಿ

author-image
Ganesh Nachikethu
Updated On
Rain Alert: ಇಂದು ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ.. ಯೆಲ್ಲೋ ಅಲರ್ಟ್ ಘೋಷಣೆ
Advertisment
  • ಚಳಿಗಾಲ ಪೂರ್ಣಗೊಳ್ಳುವ ಮುನ್ನವೇ ಕಾಲಿಟ್ಟ ಬೇಸಿಗೆ
  • ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಹವಾಮಾನ ವೈಪರೀತ್ಯ
  • ಬಿಸಿಲಿನ ತಾಪದ ಜತೆಗೆ ಭಾರೀ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು: ಚಳಿಗಾಲ ಪೂರ್ಣಗೊಳ್ಳುವ ಮುನ್ನವೇ ಈ ವರ್ಷ ಬೇಸಿಗೆ ಕಾಲಿಟ್ಟಿದೆ. ಇದರ ಪರಿಣಾಮ ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಚಳಿಯ ಪ್ರಮಾಣ ಭಾರೀ ಕಡಿಮೆ ಆಗಿದೆ. ಚಳಿಗಾಲ ಮುಗಿಯಲು ಇನ್ನೂ ಒಂದು ತಿಂಗಳು ಟೈಮ್​ ಇರೋ ಹೊತ್ತಲ್ಲೇ ಹವಾಮಾನ ವೈಪರೀತ್ಯ ಕಂಡು ಬಂದಿದೆ. ಹಾಗಾಗಿ ಬಿಸಿಲಿನ ತಾಪ ಕೂಡ ಹೆಚ್ಚಾಗಿದೆ. ಈಗ ಬಿಸಿಲಿನ ತಾಪದ ಜತೆಗೆ ಭಾರೀ ಮಳೆ ಬೀಳುವ ಮುನ್ಸೂಚನೆ ರಾಜ್ಯ ಹವಾಮಾನ ಇಲಾಖೆ ನೀಡಿದೆ.

ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. ಚಳಿ, ಬಿಸಿಲಿನೊಂದಿಗೆ ಮಳೆ ಬೀಳುವ ಸಾಧ್ಯತೆ ಇರೋ ಕಾರಣ ಶೀತ, ನೆಗಡಿ ಮತ್ತು ಕೆಮ್ಮು ಶುರುವಾಗೋ ಸಾಧ್ಯತೆ ಇದೆ. ಈ ಹವಾಮಾನ ವೈಪರೀತ್ಯವೂ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ

ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಸೇರಿದಂತೆ ಹಲವೆಡೆ ಶೀತಗಾಳಿ ಮತ್ತು ಒಣ ಹವೆ ಇರಲಿದೆ. ಒಣ ಹವೆ, ಭಾರೀ ಮಳೆ ಜತೆಗೆ ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ ಇದ್ದು, ಮನೆಯಿಂದ ಹೊರಹೋಗೋ ಮುನ್ನ ನಾವು ಒಂದು ಕ್ಷಣ ಯೋಚನೆ ಮಾಡಬೇಕಿದೆ.

ಇದನ್ನೂ ಓದಿ:ಗಿಲ್​​, ಶ್ರೇಯಸ್​ ಅಯ್ಯರ್​​ ಅಬ್ಬರ; ಇಂಗ್ಲೆಂಡ್​ ವಿರುದ್ಧ ಟೀಮ್​ ಇಂಡಿಯಾಗೆ ರೋಚಕ ಗೆಲುವು

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment