/newsfirstlive-kannada/media/post_attachments/wp-content/uploads/2024/05/Heavy-Rains-1.jpg)
ಬೆಂಗಳೂರು: ಕಳೆದ ಒಂದು ವಾರದಿಂದ ಫೆಂಗಲ್ ಚಂಡಮಾರುತ ಅಬ್ಬರಕ್ಕೆ ಇಡೀ ಕರ್ನಾಟಕ ತತ್ತರಿಸಿ ಹೋಗಿತ್ತು. ಈ ಬೆನ್ನಲ್ಲೇ ಕರ್ನಾಟಕದ ಜನರಿಗೆ ಮತ್ತೊಂದು ಕಹಿಸುದ್ದಿ ಇದೆ. ಮುಂದಿನ 2 ವಾರಗಳಲ್ಲಿ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಮಾತಾಡಿರೋ ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಅವರು, ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ 2 ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರ ಪರಿಣಾಮ ರಾಜ್ಯದಲ್ಲೂ ಭರ್ಜರಿ ಮಳೆಯಾಗಲಿದೆ ಎಂದರು.
ತಮಿಳುನಾಡಿನಿಂದ ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಫೆಂಗಲ್ ಚಂಡಮಾರುತ ಅರಬ್ಬಿಯತ್ತ ಸಾಗಿದೆ. ಕಳೆದ ಒಂದು ವಾರವಿಡೀ ಕರ್ನಾಟಕದ ಜನ ಮಳೆ, ಗಾಳಿ, ಚಳಿಗೆ ತತ್ತರಿಸಿ ಹೋಗಿದ್ದಾರೆ. ಈ ಫೆಂಗಲ್ ಚಂಡಮಾರುತದದಿಂದ ಸುಧಾರಿಸಿಕೊಳ್ಳುತ್ತಿರೋ ಹೊತ್ತಲ್ಲೇ ಮತ್ತೆರಡು ಸೈಕ್ಲೋನ್ ಸೃಷ್ಟಿಯಾಗುವ ಲಕ್ಷಣ ಕಂಡುಬಂದಿದೆ.
ಮುಂದಿನ 3 ದಿನ ಭರ್ಜರಿ ಮಳೆ
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ವ್ಯಾಪಕ ಮಳೆಯಾಗಲಿದೆ. ಇನ್ನುಳಿದ ದಿನಗಳಲ್ಲಿ ರಾಜ್ಯಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:‘ಸಾಯಿಸುತ್ತೇವೆ ಹುಷಾರ್’- ಡಿಸಿಎಂ ನಟ ಪವನ್ ಕಲ್ಯಾಣ್ಗೆ ಜೀವ ಬೆದರಿಕೆ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ